8 ಸಾವಿರ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ : ಅ.20 ಕೊನೆಯ ದಿನಾಂಕ

0

ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸುಮಾರು 8 ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನವಾಗಿದೆ.

ವಿದ್ಯಾರ್ಹತೆ:
ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತರು ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಬಿ.ಎಸ್ಸಿ, ಬಿಸಿಎ, ಎಂಸಿಎ, ಎಂಎಸ್ಸಿ, ಪದವಿ, ಗ್ರಾಜುಯೇಷನ್, ಬಿಎ ಬಿ.ಎಡ್, ಬಿಎಸ್ಸಿ ಬಿ.ಎಡ್, ಡಿ.ಎಡ್, ಬಿ.ಎಡ್ ವಿದ್ಯಾರ್ಹತೆಯನ್ನು ಪಡೆದಿರಬೇಕು. ಮಾನ್ಯತೆ ಪಡೆದಿರುವ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಕಲಿತ ಅಭ್ಯರ್ಥಿಗಳಿಗೆ ಅರ್ಜಿ ಅಲ್ಲಿಸಲು ಅವಕಾಶ ನೀಡಲಾಗಿದೆ.

ವಯೋಮಿತಿ:
ಏಪ್ರಿಲ್1, 2021ರ ಅನ್ವಯ ಹೊಸ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ಮತ್ತು ವೃತ್ತಿಯಲ್ಲಿ ಅನುಭವ ಹೊಂದಿದ ಗರಿಷ್ಟ 57 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಆಸಕ್ತ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:
ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Leave A Reply

Your email address will not be published.