ದಿ ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಲಿ ಉದ್ಯೋಗಾವಕಾಶ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

ದಿ ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಲಿ. (The Bharat Co-operative Bank Ltd) ಜಯನಗರ ಬೆಂಗಳೂರು ಇಲ್ಲಿ ಖಾಲಿ ಇರುವ 22 ಹಿರಿಯ ವ್ಯವಸ್ಥಾಪಕರು, ಕಂಪ್ಯೂಟರ್‌ ಮ್ಯಾನೇಜರ್‌, ಅಕೌಂಟಂಟ್‌, ದ್ವಿತೀಯ ದರ್ಜೆ ಸಹಾಯಕರು ಮತ್ತು ಅಟೆಂಡರ್‌ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದೊಳಗೆ ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲೆದೊಂದಿಗೆ ಅರ್ಜಿ ಸಲ್ಲಿಸಬೇಕಾಗಿದೆ.

ದಿ ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಲಿ. ನಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ದಿ ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಲಿ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 22 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್‌

ದಿ ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಲಿ. ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :

 • ಮುಖ್ಯ ಕಾರ್ಯನಿರ್ವಹಣಾಧಿಕಾರಿ : 1 ಹುದ್ದೆ
 • ಹಿರಿಯ ವ್ಯವಸ್ಥಾಪಕರು : 1 ಹುದ್ದೆ
 • ಕಂಪ್ಯೂಟರ್‌ ಮ್ಯಾನೇಜರ್‌ (ಸಿಸ್ಟಂ ಅಡ್ಮಿನಿಸ್ಟ್ರೇಟರ್‌ ಮುಖ್ಯಸ್ಥ) : 1 ಹುದ್ದೆ
 • ವ್ಯವಸ್ಥಾಪಕರು : 3 ಹುದ್ದೆಗಳು
 • ಅಕೌಂಟೆಂಟ್‌ : 2 ಹುದ್ದೆಗಳು
 • ದ್ವಿತೀಯ ದರ್ಜೆ ಸಹಾಯಕರು : 2 ಹುದ್ದೆಗಳು
 • ಅಟೆಂಡರ್‌ : 10 ಹುದ್ದೆಗಳು

ದಿ ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಲಿ. ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :

 • ಮುಖ್ಯ ಕಾರ್ಯನಿರ್ವಹಣಾಧಿಕಾರಿ / ಹಿರಿಯ / ವ್ಯವಸ್ಥಾಪಕರು / ಅಕೌಂಟೆಂಟ್‌ / ಅಸಿಸ್ಟಂಟ್‌ ಅಕೌಂಟೆಂಟ್‌ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಯಾವುದೇ ಪದವಿ ಹಾಗೂ ಕಂಪ್ಯೂಟರ್‌ ಜ್ಞಾನ ಹೊಂದಿರಬೇಕು.
 • ದ್ವಿತೀಯ ದರ್ಜೆ ಸಹಾಯಕರು ಹುದ್ದೆಗೆ ಪಿಯುಸಿ ತೇರ್ಗಡೆ ಆಗಿರಬೇಕು. ಕಂಪ್ಯೂಟರ್‌ ಬಳಕೆಯ ಅರಿವು ಇರಬೇಕು.
 • ಅಟೆಂಡರ್‌ ಹುದ್ದೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ತೇರ್ಗಡೆಯಾಗಿರಬೇಕು. ಹಾಗೆ ಕನ್ನಡ ಪ್ರಥಮ ಭಾಷೆಯಾಗಿ ಓದಿರಬೇಕು.

ವಯೋಮಿತಿ ವಿವರ :
ಈ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕಾಗುತ್ತದೆ.

ವಯೋಮಿತಿ ಸಡಿಲಿಕೆ ವಿವರ :

 • ಒಬಿಸಿ ಅಭ್ಯರ್ಥಿಗಳಿಗೆ : 38 ವರ್ಷಗಳು
 • ಎಸ್‌ಸಿ / ಎಸ್‌ ಟಿ ಅಭ್ಯರ್ಥಿಗಳಿಗೆ : 40 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

ಸಂಬಳ ವಿವರ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ 24000 ದಿಂದ 56550 ರೂ.ಗಳವರೆಗೆ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ :

 • ಸಾಮಾನ್ಯ ಕೆಟಗರಿ ಅಭ್ಯರ್ಥಿಗಳಿಗೆ : ರೂ.1000
 • ಎಸ್‌ಸಿ / ಎಸ್‌ ಟಿ / ಇತರೆ ಹಿಂದುಳಿದ ವರ್ಗದವರಿಗೆ : ರೂ.500
 • ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ದಿ ಭಾರತ್‌ ಕೋ ಆಪರೇಟಿವ್‌ ಬ್ಯಾಂಕ್‌ ಲಿಮಿಟೆಡ್‌ ಹೆಸರಿಗೆ ಡಿಡಿ / ಪೋಸ್ಟರ್‌ ಆರ್ಡರ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ :
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ದಿ ಭಾರತ್‌ ಕೋ-ಅಪರೇಟಿವ್‌ ಬ್ಯಾಂಕ್‌ ಲಿ.,
ನಂ.30, 15ನೇ ಕ್ರಾಸ್‌, 3ನೇ ಬ್ಲಾಕ್‌,
ಜಯನಗರ ಬೆಂಗಳೂರು – 560011.

ಇದನ್ನೂ ಓದಿ : ಲಕ್ಷ್ಮೀ ಸಹಕಾರಿ ಬ್ಯಾಂಕ್‌ ನಲ್ಲಿ ಅಕೌಂಟೆಂಟ್‌ ಉದ್ಯೋಗಾವಕಾಶ : ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : ಬೆಂಗಳೂರು ಮಹಾನಗರ ಪಾಲಿಕೆ : 3673 ಗ್ರೂಪ್‌ “ಡಿ” ವೃಂದದ ಪೌರಕಾರ್ಮಿಕ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ನಗರ ಸಭೆ, ಪಟ್ಟಣ ಪಂಚಾಯತ್‌ನಲ್ಲಿ 1214 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 11 ಜನವರಿ 2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 27 ಜನವರಿ 2023

The Bharat Co-operative Bank Ltd Job Vacancy : Click here to apply

Comments are closed.