ಉಡುಪಿ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳ ಗ್ರಂಥಾಲಯ ನೇಮಕಾತಿ ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ (posts of Library Supervisor) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ.
ಗ್ರಾಮ ಪಂಚಾಯತಿ ಗ್ರಂಥಾಲಯ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಹುದ್ದೆಯ ಹೆಸರು : ಗ್ರಾಮ ಪಂಚಾಯತ್ ಗ್ರಂಥಾಲಯ
ಹುದ್ದೆಗಳ ಸಂಖ್ಯೆ : 12 ಹುದ್ದೆಗಳು
ಉದ್ಯೋಗ ಸ್ಥಳ : ಕುಂದಾಪುರ, ಕಾರ್ಕಳ
ಹುದ್ದೆಯ ಹೆಸರು : ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳು
ವೇತನ : ಗ್ರಾಮ ಪಂಚಾಯತ್ ಗ್ರಂಥಾಲಯ ನಿಯಮಾವಳಿ ಪ್ರಕಾರ
ವಿದ್ಯಾರ್ಹತೆ :
ಉಡುಪಿ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳ ಗ್ರಂಥಾಲಯ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳ ಮೂಲಕ ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರುವ, ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಹೊಂದಿರುವ, ಕನಿಷ್ಟ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರ :
ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳ ಗ್ರಂಥಾಲಯ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು.
ವಯೋಮಿತಿ ಸಡಿಲಿಕೆ :
ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳ ಗ್ರಂಥಾಲಯ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆಯನ್ನು ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳ ಪ್ರಕಾರ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳ ವಿವರ :
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 4 ಏಪ್ರಿಲ್ 2023
ಇದನ್ನೂ ಓದಿ : ಮಂಗಳೂರು ವಿಶ್ವವಿದ್ಯಾನಿಲಯ ನೇಮಕಾತಿ 2023 : ಎಸ್‌ಎಸ್‌ಎಲ್‌ಸಿ ಆದವರಿಗೆ ಉದ್ಯೋಗಾವಕಾಶ
ಇದನ್ನೂ ಓದಿ : KKRTC ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಕೂಡಲೇ ಅರ್ಜಿ ಸಲ್ಲಿಸಿ
ಇದನ್ನೂ ಓದಿ : DC ಆಫೀಸ್ ರಾಯಚೂರು ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಭ್ಯರ್ಥಿಗಳ ಗಮನಕ್ಕೆ :
- ಅರ್ಹ ಅಭ್ಯರ್ಥಿಗಳು ಕುಂದಾಪುರ ತಾಲೂಕಿನ ಹೊಸಂಗಡಿ, ಇಡೂರು ಕುಂಜ್ಞಾಡಿ, ಉಳ್ಳೂರು, ಕಟ್ಬೇಲ್ತೂರು, ಕೊರ್ಗಿ, ಗುಲ್ವಾಡಿ ಹಾಗೂ ಯಡಮೊಗೆ ಮತ್ತು ಕಾರ್ಕಳ ತಾಲೂಕಿನ ನಂದಳಿಕೆ, ಇರ್ವತ್ತೂರು, ಕಲ್ಯಾ, ಕೆರ್ವಾಶೆ ಮತ್ತು ಬೋಳ ಗ್ರಾಮ ಪಂಚಾಯತ್‌ಗಳಲ್ಲಿ ತಲಾ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಹ ಅಭ್ಯರ್ಥಿಗಳು ಈ ಮೇಲೆ ತಿಳಿಸಿದ ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತ್‌ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Udupi: Applications invited for the posts of Library Supervisor