union bank recruitment 2023 : ಪದವೀಧರರಿಗೆ ಉದ್ಯೋಗಾವಕಾಶ, 47920 ರೂಪಾಯಿ ವೇತನ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ (union bank of India recruitment 2023) ಅಧಿಕೃತ ಅಧಿಸೂಚನೆ ಏಪ್ರಿಲ್ 2023 ರ ಮೂಲಕ ಸಿಂಗಲ್ ವಿಂಡೋ ಆಪರೇಟರ್-ಎ/ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಸಂಖ್ಯೆ : 11 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಸಿಂಗಲ್ ವಿಂಡೋ ಆಪರೇಟರ್-ಎ/ಕ್ಲರ್ಕ್
ವೇತನ : ರೂ.17900-47920/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ :
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ ವಿವರ :
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಏಪ್ರಿಲ್ 01, 2023 ರಂತೆ ಕನಿಷ್ಠ 18 ವರ್ಷ ವಯಸ್ಸು ಪೂರ್ಣಗೊಳಿಸಿರಬೇಕು ಹಾಗೂ ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು : 03 ವರ್ಷಗಳು
SC/ST ಅಭ್ಯರ್ಥಿಗಳು : 05 ವರ್ಷಗಳು

ಅರ್ಜಿ ಶುಲ್ಕ :
SC/ST/PwBD ಅಭ್ಯರ್ಥಿಗಳು : ರೂ.175/-
UR/OBC ಅಭ್ಯರ್ಥಿಗಳು : ರೂ.850/-

ಪಾವತಿ ವಿಧಾನ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಕ್ರೀಡಾ ಪ್ರಾವೀಣ್ಯತೆ, ಫೀಲ್ಡ್ ಟ್ರಯಲ್, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : Cochin Shipyard Recruitment 2023 : ಮಲ್ಪೆ ಶಿಪ್ ಯಾರ್ಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ 2023 : ಸಾಮಾನ್ಯ ಪ್ರವೇಶ ಪರೀಕ್ಷೆ ಆರಂಭ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 19 ಏಪ್ರಿಲ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 09 ಮೇ 2023
ನಿಮ್ಮ ಅರ್ಜಿಯನ್ನು ಮುದ್ರಿಸಲು ಕೊನೆಯ ದಿನಾಂಕ : 24 ಮೇ 2023

union bank of India recruitment 2023 : job opportunity for graduates, salary 47920 rupees

Comments are closed.