Union Bank Recruitment 2023 : ಚಾರ್ಟರ್ಡ್ ಅಕೌಂಟೆಂಟ್, ಸೀನಿಯರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಯೂನಿಯನ್ ಬ್ಯಾಂಕ್ ನೇಮಕಾತಿ ಹೊಸ ನೇಮಕಾತಿ (Union Bank Recruitment 2023) ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 42 ಚಾರ್ಟರ್ಡ್ ಅಕೌಂಟೆಂಟ್, ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಈ ಕೆಳಗೆ ತಿಳಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ಯೂನಿಯನ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank)
ಹುದ್ದೆಗಳ ಸಂಖ್ಯೆ : 42 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಚಾರ್ಟರ್ಡ್ ಅಕೌಂಟೆಂಟ್, ಕ್ರೆಡಿಟ್ ಆಫೀಸರ್
ವೇತನ : ರೂ.48170-89890/- ಪ್ರತಿ ತಿಂಗಳು

ಯೂನಿಯನ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ಮುಖ್ಯ ವ್ಯವಸ್ಥಾಪಕರು (ಚಾರ್ಟರ್ಡ್ ಅಕೌಂಟೆಂಟ್) : 3 ಹುದ್ದೆಗಳು
ಸೀನಿಯರ್ ಮ್ಯಾನೇಜರ್ (ಕ್ರೆಡಿಟ್ ಆಫೀಸರ್) : 34 ಹುದ್ದೆಗಳು
ಮ್ಯಾನೇಜರ್ (ಕ್ರೆಡಿಟ್ ಆಫೀಸರ್) : 5 ಹುದ್ದೆಗಳು

ಯೂನಿಯನ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :

  • ಮುಖ್ಯ ವ್ಯವಸ್ಥಾಪಕರು (ಚಾರ್ಟರ್ಡ್ ಅಕೌಂಟೆಂಟ್) : ಸಿಎಯಲ್ಲಿ ಉತ್ತೀರ್ಣರಾಗಿರಬೇಕು.
  • ಸೀನಿಯರ್ ಮ್ಯಾನೇಜರ್ (ಕ್ರೆಡಿಟ್ ಆಫೀಸರ್) : ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
  • ಮ್ಯಾನೇಜರ್ (ಕ್ರೆಡಿಟ್ ಆಫೀಸರ್) : ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಯೂನಿಯನ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಯಸ್ಸಿನ ಮಿತಿ ವಿವರ :

  • ಮುಖ್ಯ ವ್ಯವಸ್ಥಾಪಕರು (ಚಾರ್ಟರ್ಡ್ ಅಕೌಂಟೆಂಟ್) : ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ಗರಿಷ್ಠ 40 ವರ್ಷ ವಯಸ್ಸನ್ನು ಮೀರಿರಬಾರದು.
  • ಸೀನಿಯರ್ ಮ್ಯಾನೇಜರ್ (ಕ್ರೆಡಿಟ್ ಆಫೀಸರ್) : ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.
  • ಮ್ಯಾನೇಜರ್ (ಕ್ರೆಡಿಟ್ ಆಫೀಸರ್) : ಅಭ್ಯರ್ಥಿಗಳು ಕನಿಷ್ಠ 22 ವರ್ಷ ವಯಸ್ಸಾಗಿರಬೇಕು. ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ :
OBC (NCL) ಅಭ್ಯರ್ಥಿಗಳು : 03 ವರ್ಷಗಳು
SC/ST ಅಭ್ಯರ್ಥಿಗಳು : 05 ವರ್ಷಗಳು
PWBD ಅಭ್ಯರ್ಥಿಗಳು : 10 ವರ್ಷಗಳು

ಅರ್ಜಿ ಶುಲ್ಕ:
SC/ST/PWBD ಅಭ್ಯರ್ಥಿಗಳು : ರೂ.150/-
OBC ಅಭ್ಯರ್ಥಿಗಳು : ರೂ.850/-
ಪಾವತಿ ವಿಧಾನ : ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಯೂನಿಯನ್ ಬ್ಯಾಂಕ್ ನೇಮಕಾತಿ ಪ್ರಕಾರ ಅರ್ಹ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಯೂನಿಯನ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವೇತನದ ವಿವರ :
ಮುಖ್ಯ ವ್ಯವಸ್ಥಾಪಕರು (ಚಾರ್ಟರ್ಡ್ ಅಕೌಂಟೆಂಟ್) : ರೂ.76010-89890/-
ಹಿರಿಯ ವ್ಯವಸ್ಥಾಪಕರು (ಕ್ರೆಡಿಟ್ ಆಫೀಸರ್) : ರೂ.63840-78230/-
ಮ್ಯಾನೇಜರ್ (ಕ್ರೆಡಿಟ್ ಆಫೀಸರ್) : ರೂ.48170-69810/-

ಇದನ್ನೂ ಓದಿ : ಕರ್ನಾಟಕ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : Indian Post Recruitment 2023 : ಅಂಚೆ ಇಲಾಖೆಯಲ್ಲಿ 40889 ಹುದ್ದೆಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ : KMF RBKMUL Recruitment 2023 : ಕೆಎಮ್‌ಎಫ್‌ ವಿವಿಧ ಹುದ್ದೆಗಳಿಗೆ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23 ಜನವರಿ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-ಫೆಬ್ರವರಿ-2023
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 12-ಫೆಬ್ರವರಿ-2023

Union Bank Recruitment 2023 : Applications invited for the post of Chartered Accountant, Senior Manager

Comments are closed.