Uttara Kannada Zilla Panchayat Recruitment 2023 : ಉತ್ತರ ಕನ್ನಡ ಜಿಲ್ಲಾ ಪಂಚಾಯತ್ : ಪದವಿ, ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ (Uttara Kannada Zilla Panchayat Recruitment 2023) ಜೂನ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ತಾಂತ್ರಿಕ ಸಹಾಯಕ, ತಾಲೂಕು ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಉತ್ತರ ಕನ್ನಡ ಜಿಲ್ಲಾ ಪಂಚಾಯತ್
ಹುದ್ದೆಗಳ ಸಂಖ್ಯೆ : 14 ಹುದ್ದೆಗಳು
ಉದ್ಯೋಗ ಸ್ಥಳ : ಉತ್ತರ ಕನ್ನಡ
ಹುದ್ದೆಯ ಹೆಸರು : ತಾಂತ್ರಿಕ ಸಹಾಯಕ, ತಾಲೂಕು ಆಡಳಿತ ಸಹಾಯಕ
ವೇತನ : ರೂ.22000-28000/- ಪ್ರತಿ ತಿಂಗಳು

ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :

  • ತಾಂತ್ರಿಕ ಸಹಾಯಕ : 12 ಹುದ್ದೆಗಳು
  • ತಾಲೂಕು ಆಡಳಿತ ಸಹಾಯಕ : 1 ಹುದ್ದೆ
  • ತಾಲೂಕು ಐಇಸಿ ಸಂಯೋಜಕರು : 1 ಹುದ್ದೆ

ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :

  • ತಾಂತ್ರಿಕ ಸಹಾಯಕ : ಈ ಪಂಚಾಯತ್‌ನಲ್ಲಿ ಖಾಲಿ ಇರುವ ಈ ಹುದ್ದೆಗಾಗಿ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E, B.Sc, M.Sc ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
  • ತಾಲೂಕು ಆಡಳಿತ ಸಹಾಯಕ : ಈ ಪಂಚಾಯತ್‌ನಲ್ಲಿ ಖಾಲಿ ಇರುವ ಈ ಹುದ್ದೆಗಾಗಿ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಕಾಂ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
  • ತಾಲೂಕು ಐಇಸಿ ಕೋ-ಆರ್ಡಿನೇಟರ್ ಸಮೂಹ ಸಂವಹನದಲ್ಲಿ : ಈ ಪಂಚಾಯತ್‌ನಲ್ಲಿ ಖಾಲಿ ಇರುವ ಈ ಹುದ್ದೆಗಾಗಿ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಅನುಭವದ ವಿವರ :
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಕೃತ ಅದಿಸೂಚನೆ ಪ್ರಕಾರ, ಅಭ್ಯರ್ಥಿಗಳು ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ಕನಿಷ್ಠ 02 ರಿಂದ 03 ವರ್ಷಗಳ ಅನುಭವವನ್ನು ಹೊಂದಿರಬೇಕು.

ವಯೋಮಿತಿ ವಿವರ :
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಕೃತ ಅದಿಸೂಚನೆ ಪ್ರಕಾರ, ಈ ಪಂಚಾಯತ್‌ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಕನಿಷ್ಟ 25 ವರ್ಷ ದಿಂದ ಗರಿಷ್ಠ 40 ವರ್ಷ ಒಳಗಿನ ವಯಸ್ಸನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಕೃತ ಅದಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ಸಂಬಂಧಪಟ್ಟ ಹುದ್ದೆಗೆ ಅನುಸಾರವಾಗಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನಿಯಮಗಳ ಪ್ರಕಾರ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಕೃತ ಅದಿಸೂಚನೆ ಪ್ರಕಾರ, ಈ ಪಂಚಾಯತ್‌ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಕೃತ ಅದಿಸೂಚನೆ ಪ್ರಕಾರ, ಈ ಪಂಚಾಯತ್‌ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ಕಂಪ್ಯೂಟರ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಸಂಬಳ (ತಿಂಗಳಿಗೆ)ದ ವಿವರ :

  • ತಾಂತ್ರಿಕ ಸಹಾಯಕ : ರೂ.28000/-
  • ತಾಲೂಕು ಆಡಳಿತ ಸಹಾಯಕ : ರೂ.22000/-
  • ತಾಲೂಕು ಐಇಸಿ ಕೋ-ಆರ್ಡಿನೇಟರ್ : ರೂ.28000/-

ಇದನ್ನೂ ಓದಿ : KARBWWB Recruitment 2023 : ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಉದ್ಯೋಗಾವಕಾಶ, 70 ಸಾವಿರ ರೂ, ವೇತನ

ಇದನ್ನೂ ಓದಿ : Coffee Board Recruitment 2023 : ಕಾಫಿ ಬೋರ್ಡ್ ಆಫ್ ಇಂಡಿಯಾ : ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಜೂನ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26 ಜೂನ್ 2023

Uttara Kannada Zilla Panchayat Recruitment 2023 : Uttara Kannada Zilla Panchayat : Job Opportunity for Graduates, Post Graduates

Comments are closed.