ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ : ಇಂದೇ ಅರ್ಜಿ ಸಲ್ಲಿಸಿ

0

ಚಿಕ್ಕಮಗಳೂರು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 50 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆ ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ : ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸಿಬಿಎಸ್ ಸಿ ಅಥವಾ ಐಸಿಎಸ್ ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ವಿದ್ಯಾರ್ಹತೆಯ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.


ವಯೋಮಿತಿ : ಗ್ರಾಮಲೆಕ್ಕಿಗ ಹುದ್ದೆಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಟ 35 ವರ್ಷ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋ ಸಡಿಲಿಕೆ ಹಾಗೂ 2ಎ, 2ಬಿ, 3ಎ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ ನೀಡಲಾಗಿದೆ.

ವೇತನಶ್ರೇಣಿ : 21,400 ರೂ. – 42,000 ರೂ.

ಆಯ್ಕೆವಿಧಾನ : ಅಭ್ಯರ್ಥಿಗಳು ಪಿಯುಸಿ ಹಾಗೂ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಜೊತೆಗೆ ಮೀಸಲಾಯಿತಿಯ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂಪಾಯಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 150 ರೂಪಾಯಿ ಶುಲ್ಕ ನಿಗದಿ ಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಮಾರ್ಚ್ 24ರ ಒಳಗಾಗಿ ಆನ್ ಲೈನ್ ಅಥವಾ ಅಂಚೆ ಕಚೇರಿ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಕೊನೆಯ ದಿನಾಂಕ : ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕವೇ ಮಾರ್ಚ್ 20, 2020 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಆದರೆ ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶವಿಲ್ಲ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ : http://chikkamagaluru-va.kar.nic.in/

Leave A Reply

Your email address will not be published.