ಯೆಸ್ ಬ್ಯಾಂಕ್ ನೇಮಕಾತಿ 2023 : ವಿವಿಧ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯೆಸ್ ಬ್ಯಾಂಕ್ ನೇಮಕಾತಿ (Yes Bank Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಮ್ಯಾನೇಜರ್, ಸೇಲ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

Yes Bank Recruitment 2023 : YES ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :

ಬ್ಯಾಂಕ್ ಹೆಸರು : ಯೆಸ್ ಬ್ಯಾಂಕ್ (YES Bank)
ಪೋಸ್ಟ್‌ಗಳ ಸಂಖ್ಯೆ : ನಿರ್ದಿಷ್ಟಪಡಿಸಲಾಗಿಲ್ಲ
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಸಹಾಯಕ ವ್ಯವಸ್ಥಾಪಕ, ಮಾರಾಟ ಅಧಿಕಾರಿ
ಸಂಬಳ : YES ಬ್ಯಾಂಕ್ ನಿಯಮಗಳ ಪ್ರಕಾರ

ಶೈಕ್ಷಣಿಕ ಅರ್ಹತೆ :
ಯೆಸ್ ಬ್ಯಾಂಕ್ ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ ವಿವರ :
ಯೆಸ್ ಬ್ಯಾಂಕ್ ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಯೋಮಿತಿಯನ್ನು YES ಬ್ಯಾಂಕ್ ನಿಯಮಗಳ ಪ್ರಕಾರ ನೀಡಲಾಗುತ್ತದೆ.

ಅರ್ಜಿ ಶುಲ್ಕ :
ಯೆಸ್ ಬ್ಯಾಂಕ್ ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ :
ಯೆಸ್ ಬ್ಯಾಂಕ್ ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : KHB Recruitment 2023 : GIS ಸ್ಪೆಷಲಿಸ್ಟ್‌ ಹುದ್ದೆಗೆ ಉದ್ಯೋಗಾವಕಾಶ ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : ಉಡುಪಿ : ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಮಂಗಳೂರು ವಿಶ್ವವಿದ್ಯಾನಿಲಯ ನೇಮಕಾತಿ 2023 : ಎಸ್‌ಎಸ್‌ಎಲ್‌ಸಿ ಆದವರಿಗೆ ಉದ್ಯೋಗಾವಕಾಶ

ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಮಾರ್ಚ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಮಾರ್ಚ್ 2023

Yes Bank Recruitment 2023 : Application Invitation for Various Officer Posts

Comments are closed.