(Zilla Panchayat Recruitment 2022 )ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ 2 ಅರಣ್ಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಚಿಕ್ಕಮಗಳೂರು ಭಾಗದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 19 2022 ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
Zilla Panchayat Recruitment 2022 : ಖಾಲಿ ಇರುವ ಹುದ್ದೆಗಳ ವಿವರ
ಸಂಸ್ಥೆಯ ಹೆಸರು:ಚಿಕ್ಕಮಗಳೂರು ಜಿಲ್ಲಾ ಪಂಚಾಯತ್
ಹುದ್ದೆಯ ಹೆಸರು: ತಾಂತ್ರಿಕ ಸಹಾಯಕ (ಅರಣ್ಯ)
ಹುದ್ದೆಗಳ ಸಂಖ್ಯೆ:2
ಉದ್ಯೋಗ ಸ್ಥಳ:ಚಿಕ್ಕಮಗಳೂರು
ವೇತನ:
24000/- ಪ್ರತಿ ತಿಂಗಳು
ವಿದ್ಯಾರ್ಹತೆ ವಿವರ:
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ B.Sc, M.Sc (Forestry) ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅರ್ಭ್ಯರ್ಥಿಗಳು ಕನಿಷ್ಠ 21 ರಿಂದ ಗರಿಷ್ಠ 40 ವಯಸ್ಸಿನವರಾಗಿರಬೇಕು.
ಅರ್ಜಿ ಶುಲ್ಕ:ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ:
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅರ್ಭ್ಯರ್ಥಿಗಳನ್ನು ಅನುಭವ ಮತ್ತು ದಾಖಲೆಗಳ ಪರಿಶೀಲನೆಯ
ಮೂಲಕ ಆಯ್ಕೆ ಮಾಡಲಾಗುತ್ತದೆ
ಇದನ್ನೂ ಓದಿ:NALCO Recruitment 2022:39 ಡೆಪ್ಯುಟಿ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದನ್ನೂ ಓದಿ:Bank Recruitment 2022: ಸಹಕಾರಿ ಬ್ಯಾಂಕ್ ನಲ್ಲಿ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ:
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ)9-11-2022 ರಿಂದ 19-11-2022 ರವರೆಗೆ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನ ಅಧಿಕೃತ ವೆಬ್‌ಸೈಟ್ ಆದ chikkamagaluru.nic.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 9-ನವೆಂಬರ್-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-ನವೆಂಬರ್-2022
Zilla Panchayat Recruitment 2022 : Applications invited for the posts of Forest Technical Assistant