Zilla Panchayat Recruitment :ಬಾಗಲಕೋಟೆ ಜಿ.ಪಂ.ನಲ್ಲಿ 54 ಹುದ್ದೆಗಳು ಖಾಲಿ : ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಬಾಗಲಕೋಟೆ ಜಿಲ್ಲಾ ಪಂಚಾಯತಿಯಲ್ಲಿ (Zilla Panchayat Recruitment) ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಾಗಲಕೋಟೆ ಭಾಗದಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 23, 2022 ಮೊದಲು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

Zilla Panchayat Recruitment : ಹುದ್ದೆಯ ಸಂಪೂರ್ಣ ವಿವರ:

ಸಂಸ್ಥೆಯ ಹೆಸರು :ಬಾಗಲಕೋಟೆ ಜಿಲ್ಲಾ ಪಂಚಾಯತ್
ಹುದ್ದೆಯ ಹೆಸರು : ಬಿಲ್ ಕಲೆಕ್ಟರ್, ಕ್ಲರ್ಕ್, ಅಟೆಂಡರ್
ಹುದ್ದೆಯ ಸಂಖ್ಯೆ: 54
ಉದ್ಯೋಗ ಸ್ಥಳ :ಬಾಗಲಕೋಟೆ

ಹುದ್ದೆಯ ಸಂಖ್ಯೆಯ ವಿವರ:
ಬಿಲ್ ಕಲೆಕ್ಟರ್- 10
ಕ್ಲರ್ಕ್ ಮತ್ತು ಡೇಟಾ ಎಂಟ್ರಿ ಆಪರೇಟರ್ (DEO) -12
ಅಟೆಂಡರ್ -32

ವಿದ್ಯಾರ್ಹತೆ ವಿವರ:
ಬಾಗಲಕೋಟೆ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿಯುಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ: ಅರ್ಹ ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.

ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
PWD ಅಭ್ಯರ್ಥಿಗಳು: 100 ರೂ.
SC/ST/Cat-I/Ex-Servicemen ಅಭ್ಯರ್ಥಿಗಳು: 200 ರೂ.
Cat-2A/2B/3A & 3B ಅಭ್ಯರ್ಥಿಗಳು:300 ರೂ.
ಸಾಮಾನ್ಯ ಅಭ್ಯರ್ಥಿಗಳು: 500 ರೂ

ಆಯ್ಕೆ ವಿಧಾನ:
ಅರ್ಹ ಅಭ್ಯಥಿಗಳನ್ನು ಮೆರಿಟ್ ಪಟ್ಟಿಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:IISC Recruitment : ಪತ್ರಿಕೋದ್ಯಮ ಪದವೀಧರರಿಗೆ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಇದನ್ನೂ ಓದಿ:ISRO Recruitment 2022:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗಾವಕಾಶ : 56,100ರೂ. ವೇತನ

ಇದನ್ನೂ ಓದಿ:IISC Recruitment : ಪತ್ರಿಕೋದ್ಯಮ ಪದವೀಧರರಿಗೆ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಅರ್ಜಿ ಸಲ್ಲಿಸುವ ವಿಧಾನ :
ಬಾಗಲಕೋಟೆ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 17-11- 2022 ರಿಂದ 22-12-2022ರವರೆಗೆ ಬಾಗಲಕೋಟೆ ಜಿಲ್ಲಾ ಪಂಚಾಯತಿಯ ಅಧಿಕೃತ ವೆಬ್‌ ಸೈಟ್‌ ಆದ bagalkot.nic.inನಲ್ಲಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17ನವೆಂಬರ್ 2022.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23 ಡಿಸೆಂಬರ್ 2022.

Zilla Panchayat Recruitment 54 Vacancies in Bagalkota G.P. : Interested Apply Immediately

Comments are closed.