ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಮಾ.29ರವೆಗೂ ರಾಜ್ಯದಲ್ಲಿ ಮಳೆ

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಾರ್ಚ್ 25ರಿಂದ ಎರಡು ದಿನ ಮಳೆಯಾಗಲಿದೆ.

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮಾರ್ಚ್ 29ರವರೆಗೂ ವರುಣನ ಅಬ್ಬರ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಸಂದರ್ಭದಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಾರ್ಚ್ 25ರಿಂದ ಎರಡು ದಿನ ಮಳೆಯಾಗಲಿದೆ. ಮಾ. 27ರಿಂದ 29ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದೆ. ಹಾಗೆಯೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಯಚೂರು, ವಿಜಯಪುರ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಾರ್ಚ್ 29ರಂದು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ 2026: ಅಕಾಲಿಕ ಮಳೆಯಿಂದ ಬೆಳೆ ಹಾನಿಯಾದ್ರೆ ರೈತರಿಗೆ ಸಿಗಲಿದೆ ಪರಿಹಾರ

ಮಳೆಯ ಮುನ್ಸೂಚನೆ ನಡೆಯುವೆಯೇ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ತಾಪಮಾನ ಕುಸಿತ ಕೂಡ ಕಂಡುಬಂದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2 ರಿಂದ 5 ಡಿಗ್ರಿ ಸೆಲ್ಸಿಯಸ್​ ಇಳಿಕೆ ಕಂಡಿದೆ. ಹೀಗಾಗಿ ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿದ್ದ ಉತ್ತರ ಕರ್ನಾಟಕ ಭಾಗದ ಜನತೆ ಕೊಂಚ ನಿಟ್ಟುಸಿರು ಬಿಡುವಂತಾಗಿದೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories