ರಾಜ್ಯದಲ್ಲಿಂದು ಗುಡುಗು ಸಹಿತ ಮಳೆ : ವೇಗದ ಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ.

ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ವರುಣ ತಂಪೆರಿದಿದ್ದಾನೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿಯಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಇರಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಇಂದು ಮುಂಜಾನೆಯಿಂದಲೇ ಗುಡುಗು ಸಹಿತ ಮಳೆ ಆರಂಭಗೊಂಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಲೋಮೀಟರ್​ ಇರಲಿದ್ದು, ಮಳೆಯ ಕೆಳಗೆ ಆಶ್ರಯ ಪಡೆಯದಂತೆ ಐಎಂಡಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಕರ್ನಾಟಕದ ‘ಕಾಶ್ಮೀರ’ವಾದ ಮುಂಡಗೋಡು-ಕಲಘಟಗಿ ರಸ್ತೆ: ಭಾರಿ ಆಲಿಕಲ್ಲು ಮಳೆಗೆ ಬೆಚ್ಚಿಬಿದ್ದ ಜನ, ರಸ್ತೆಯೆಲ್ಲಾ ಹಿಮಮಯ

ಇನ್ನು ಉತ್ತರ ಕರ್ನಾಟಕದ ಬೀದರ್, ವಿಜಯಪುರ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ತಾಪಮಾನ 37 ಡಿಗ್ರಿ ಸೆಲ್ಸಿಯಸ್​ ತಲುಪುವ ನಿರೀಕ್ಷೆಯಿದೆ. ಆದರೂ ಈ ಗರಿಷ್ಠ ತಾಪಮಾನದ ನಡುವೆಯೂ ಗುಡುಗು ಸಹಿತ ಹಗುರ ಮಳೆ ಸಂಭವಿಸುವ ನಿರೀಕ್ಷೆಯಿದೆ. ಇನ್ನುಳಿದಂತೆ ಚಿತ್ರದುರ್ಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಿಂಚು – ಗುಡುಗು ಸಹಿತ ಮಳೆಯಾಗಲಿದೆ. ಎಷ್ಟೇ ಮಳೆಯಿದ್ದರೂ ಮಧ್ಯಾಹ್ನದ ವೇಳೆಗೆ ಸೂರ್ಯನ ಶಾಖ ಅತಿಯಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories