ಕರಾವಳಿ ಪ್ರವಾಸೋದ್ಯಮಕ್ಕೆ ನಟ ರಿಷಬ್​ ಶೆಟ್ಟಿ ರಾಯಭಾರಿ!

ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ರಾಜ್ಯ ಸರ್ಕಾರ ಭರ್ಜರಿ ಮಾಸ್ಟರ್ ಪ್ಲಾನ್ ರೂಪಿಸಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಪ್ರವಾಸೋದ್ಯಮ ಪ್ರಚಾರದ ರಾಯಭಾರಿಯಾಗಿ ‘ಕಾಂತಾರ’ ಖ್ಯಾತಿಯ ನಟ ರಿಷಬ್ ಶೆಟ್ಟಿ ಅವರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆದಿವೆ.

ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ರಾಜ್ಯ ಸರ್ಕಾರ ಭರ್ಜರಿ ಮಾಸ್ಟರ್ ಪ್ಲಾನ್ ರೂಪಿಸಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಪ್ರವಾಸೋದ್ಯಮ ಪ್ರಚಾರದ ರಾಯಭಾರಿಯಾಗಿ ‘ಕಾಂತಾರ’ ಖ್ಯಾತಿಯ ನಟ ರಿಷಬ್ ಶೆಟ್ಟಿ ಅವರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆದಿವೆ. ಶುಕ್ರವಾರ ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಿಷಬ್ ಶೆಟ್ಟಿ ಅವರ ಬೆನ್ನು ತಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ.

ರಾಜ್ಯದ ಅತಿ ಉದ್ದದ ಸಮುದ್ರ ತೀರ ಮತ್ತು ಪಶ್ಚಿಮ ಘಟ್ಟಗಳ ನಿಸರ್ಗವನ್ನು ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸುಮಾರು 45 ಬೃಹತ್ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಿಂದ ಕರಾವಳಿ ಭಾಗದಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಹೆಲಿ ಟೂರಿಸಂ ಸೇರಿದಂತೆ ಪ್ರವಾಸೋದ್ಯಮದ ಮೂಲಸೌಕರ್ಯ ಅಭಿವೃದ್ಧಿಗೆ ಬಂಡವಾಳ ಹೂಡುವ ಉದ್ಯಮಿಗಳಿಗೆ ತಾಂತ್ರಿಕ ತೊಂದರೆಗಳು ಎದುರಾಗದಂತೆ ಏಕಗವಾಕ್ಷಿ ವ್ಯವಸ್ಥೆಯನ್ನು ಜಾರಿಗೆ ತರಲು ಮುಖ್ಯಮಂತ್ರಿಗಳು ಒಲವು ತೋರಿದ್ದಾರೆ.

Also Read: ಫ್ರೀ ಬಸ್ ಪ್ರಯಾಣದ ಹೊರೆ! ಟಿಕೆಟ್ ದರ ಹೆಚ್ಚಳಕ್ಕೆ ಗ್ಯಾರಂಟಿ ಸಮಿತಿ ಸಲಹೆ

ಈ ಪ್ರಮುಖ ಸಭೆಯಲ್ಲಿ ಭಾಗವಹಿಸಿದ್ದ ನಟ ರಿಷಬ್ ಶೆಟ್ಟಿ ಅವರು, ಕರಾವಳಿಯ ಜಾನಪದ ಕಲೆ, ವಿಶಿಷ್ಟ ಸಂಗೀತ ಮತ್ತು ಕರಾವಳಿಯ ಸಂಸ್ಕೃತಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು. ಅಲ್ಲದೆ ಗೋವಾ, ಕೇರಳ ಮತ್ತು ಕರ್ನಾಟಕದ ಕರಾವಳಿ ತೀರಗಳಲ್ಲಿ ಸಿನೆಮಾ ಚಿತ್ರೀಕರಣಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಟ್ಟರೆ ಚಿತ್ರರಂಗದ ಜೊತೆಗೆ ಸ್ಥಳೀಯವಾಗಿ ಆರ್ಥಿಕ ಪ್ರಗತಿಯೂ ಸಾಧ್ಯವಾಗುತ್ತದೆ ಎಂದು ಅವರು ಸಲಹೆ ನೀಡಿದ್ದಾರೆ. ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಹಾಗೂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದ ಈ ಸಭೆಯ ನಿರ್ಧಾರಗಳಿಗೆ ಇಂದಿನ ಸಂಪುಟ ಸಭೆಯ ಒಪ್ಪಿಗೆ ಸಿಕ್ಕ ತಕ್ಷಣವೇ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ.

Actor Rishabh Shetty is ambassador for coastal tourism

 

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories