ಬಾಗಲಕೋಟೆ: ಕಬ್ಬು ಕಟಾವು ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿ; ಮಗು ಸೇರಿ ನಾಲ್ವರು ದುರ್ಮರಣ
Bagalkote Accident | Latest News: ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರ ಮೂಲದ ಕಾರ್ಮಿಕರು ಕಬ್ಬು ಕಟಾವು ಕೆಲಸಕ್ಕಾಗಿ ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ, ಅದರಲ್ಲಿದ್ದ ಕಾರ್ಮಿಕರು ಟ್ರ್ಯಾಲಿಯಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಶನಿವಾರ ಮುಂಜಾನೆ ಸುಮಾರು 2 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಮೃತರ ಗುರುತು:
ಮೃತಪಟ್ಟವರೆಲ್ಲರೂ ಮಹಾರಾಷ್ಟ್ರ ರಾಜ್ಯದ ಯವತ್ಮಾಳ್ ಜಿಲ್ಲೆಯ ಬೂಸಾ ತಾಲೂಕಿನ ಗುಪವಾಡಿ ಗ್ರಾಮದ ನಿವಾಸಿಗಳಾಗಿದ್ದಾರೆ:
- ಮನೀಷ್ ಪಾಂಡೆ (23)
- ಹಲಕಿ ಪಾಂಡೆ (2)
- ಲಕ್ಷ್ಮಿ ಚಿರಮಡಿ (27)
- ರೇಖಾ ಭೂಕೆ
ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿಗೆ 8ನೇ ತರಗತಿಗೆ ಪ್ರವೇಶ ಸಿಗುತ್ತೆ; ಹೀಗೆ ಅಪ್ಲೈ ಮಾಡಿ
ಪೊಲೀಸ್ ಭೇಟಿ ಮತ್ತು ತನಿಖೆ:
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಜಮಖಂಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಬದುಕು ಅರಸಿ ಬಂದಿದ್ದ ಕಾರ್ಮಿಕರ ಸಾವು ಅವರ ಕುಟುಂಬಸ್ಥರಲ್ಲಿ ಮತ್ತು ಗ್ರಾಮಸ್ಥರಲ್ಲಿ ಶೋಕ ಸಾಗರ ಮೂಡಿಸಿದೆ.



