ಇಬ್ಬರು ಬಿಜೆಪಿ ಮುಖಂಡರ ಹತ್ಯೆ : ತನಿಖೆಗೆ ಬಿ.ವೈ.ವಿಜಯೇಂದ್ರ ಆಗ್ರಹ

BJP murder : ಬೆಂಗಳೂರು/ ಆಂಧ್ರಪ್ರದೇಶ : ಬೆಂಗಳೂರು ಮೂಲದ ಇಬ್ಬರು ಬಿಜೆಪಿ ಮುಖಂಡರನ್ನು ಆಂಧ್ರಪ್ರದೇಶದಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆತಂಕ ಮೂಡಿಸಿದೆ. ಪ್ರಕರಣದ ಸಮಗ್ರ ತನಿಖೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನ ಕಡಗೋಡಿ ನಿವಾಸಿಗಳಾದ ಉದ್ಯಮಿ ವೀರಸ್ವಾಮಿ ರೆಡ್ಡಿ ಮತ್ತು ಅವರ ಪುತ್ರ, ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರಶಾಂತ್ ರೆಡ್ಡಿ ಅವರು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಆಂಧ್ರಪ್ರದೇಶಕ್ಕೆ ತೆರಳಿದ್ದರು.

ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ನರಸರಾವ್ ಪೇಟೆಯಲ್ಲಿರುವ ನ್ಯಾಯಾಲಯದ ಸಮೀಪದ ಟಿಫಿನ್ ಸೆಂಟರ್ ಬಳಿಯಿಂದ ಅಪರಿಚಿತ ವ್ಯಕ್ತಿಗಳು ಇಬ್ಬರನ್ನು ಅಪಹರಿಸಿದ್ದಾರೆ.

ಇದನ್ನೂ ಓದಿ : ಕಾರ್ಕಳದಲ್ಲಿ ಸೈಬರ್ ವಂಚನೆ: ಆನ್‌ಲೈನ್ ಹೂಡಿಕೆಯ ಆಮಿಷಕ್ಕೆ ₹15 ಲಕ್ಷ ಕಳೆದುಕೊಂಡ ಯುವಕ!

ಕೆಲವು ಗಂಟೆಗಳ ನಂತರ, ಅವರ ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಇಬ್ಬರ ಶವಗಳನ್ನು ನೆರೆಯ ಬಾಪಟ್ಲಾ ಜಿಲ್ಲೆಯ ಸಂತಮಗುಳೂರು ಬಳಿ ಪತ್ತೆಯಾಗಿದೆ.

ಇದು ಪೂರ್ವ ನಿಯೋಜಿತ ಹತ್ಯೆಯಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಶಾಂತ್‌ ರೆಡ್ಡಿ ಬಿಜೆಪಿ ಯುವ ಮೋರ್ಚಾದ ಸಕ್ರಿಯ ಸದಸ್ಯರಾಗಿದ್ದರು. ಹತ್ಯೆಯ ಉದ್ದೇಶ ಸ್ಪಷ್ಟವಾಗಿಲ್ಲವಾದರೂ, ಪೊಲೀಸರು ಪಲ್ನಾಡು ಮತ್ತು ಬಾಪಟ್ಲಾ ಜಿಲ್ಲೆಗಳಲ್ಲಿ ಜಂಟಿ ತನಿಖೆ ಆರಂಭಿಸಿದ್ದಾರೆ.

ಬಿಜೆಪಿ ಮುಖಂಡರಾಗಿರುವ ಈ ತಂದೆ ಹಾಗೂ ಮಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕರ್ನಾಟಕದ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.ಇಬ್ಬರು ಬಿಜೆಪಿ ಮುಖಂಡರ ಹತ್ಯೆ ಆಘಾತಕಾರಿ ಎಂದಿದ್ದಾರೆ.

ಕೊಲೆಯ ಹಿಂದಿನ ಉದ್ದೇಶವನ್ನು ಕೂಡಲೇ ಬಯಲು ಮಾಡಬೇಕು. ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಕರಾವಳಿಯ ಪ್ರತಿಷ್ಠಿತ ಕೋ-ಅಪರೇಟಿವ್‌ ಬ್ಯಾಂಕ್‌ ಲೈಸೆನ್ಸ್‌ ರದ್ದು ಮಾಡಿದ RBI

ಹಿಂದೂ ಕಾರ್ಯಕರ್ತರು ಮತ್ತು ಬಿಜೆಪಿ ನಾಯಕರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮೃತ ವೀರಸ್ವಾಮಿ ರೆಡ್ಡಿ ಮತ್ತು ಪ್ರಶಾಂತ್ ರೆಡ್ಡಿ ಅವರ ಕುಟುಂಬಕ್ಕೆ ಪಕ್ಷದಿಂದ ಎಲ್ಲಾ ರೀತಿಯ ಬೆಂಬಲ ನೀಡಲಾಗುವುದು ಎಂದು ವಿಜಯೇಂದ್ರ ಭರವಸೆ ನೀಡಿದ್ದಾರೆ.

BJP Yuva Morcha two members murder in AP BY Vijayendra demand for investigation

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories