ಲಕ್ಕುಂಡಿ : ರಿತ್ತಿ ಕುಟುಂಬಸ್ಥರಿಗೆ ಸರ್ಕಾರದಿಂದ ಬಂಪರ್​ ಗಿಫ್ಟ್​ : ನಗದು, ನಿವೇಶನ, ಉದ್ಯೋಗ ಭಾಗ್ಯ

ಮನೆ ನಿರ್ಮಾಣದ ಸಂದರ್ಭದಲ್ಲಿ ದೊರೆತ ಚಿನ್ನದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದ ರಿತ್ತಿ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ಇನಾಮು ಹಸ್ತಾಂತರಿಸಿದೆ. ಗದಗ ಜಿಲ್ಲಾ ಉಸ್ತುವಾರಿ […]

Lakkundi Treasure Return Gift

ಮನೆ ನಿರ್ಮಾಣದ ಸಂದರ್ಭದಲ್ಲಿ ದೊರೆತ ಚಿನ್ನದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದ ರಿತ್ತಿ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ಇನಾಮು ಹಸ್ತಾಂತರಿಸಿದೆ. ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್​.ಕೆ ಪಾಟೀಲ ರಿತ್ತಿ ಕುಟುಂಬಸ್ಥರನ್ನು ಸನ್ಮಾನಿಸಿ ಬಹುಮಾನ ನೀಡಿದ್ದಾರೆ. ಗದಗದ ಕೆ.ಎಚ್​ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ರಿತ್ತಿ ಕುಟುಂಬಸ್ಥರನ್ನು ಸಚಿವ ಎಚ್​. ಕೆ ಪಾಟೀಲ್​ ಸನ್ಮಾನಿಸಿದ್ದಾರೆ.
ಪ್ರಜ್ವಲ್ ರಿತ್ತಿ ಕುಟುಂಬಕ್ಕೆ 30*40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ. ನಗದು ಸಹಾಯ ಹಾಗೂ ಪ್ರಜ್ವಲ್ ತಾಯಿ ಕಸ್ತೂರೆವ್ವ ರಿತ್ತಿಗೆ ಹೊರಗುತ್ತಿಗೆ ಆಧಾರದ ಸರ್ಕಾರಿ ಕೆಲಸ ನೀಡಲಾಗುತ್ತದೆ ಎಂದು ಹೆಚ್.ಕೆ ಪಾಟೀಲ್ ಘೋಷಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ಶುಭ ಸುದ್ದಿ; ಅಟಲ್ ಪಿಂಚಣಿ ಯೋಜನೆ 2030-31ರವರೆಗೆ ವಿಸ್ತರಣೆ

ಅಲ್ಲದೇ ಇದೇ ಸಂದರ್ಭದಲ್ಲಿ ಎಚ್​.ಕೆ ಪಾಟೀಲ ರಿತ್ತಿ ಕುಟುಂಬಕ್ಕೆ ನಿವೇಶನ ಪ್ರಮಾಣ ಪತ್ರ ಹಾಗೂ ಕಸ್ತೂರೆವ್ವ ರಿತ್ತಿ ಅವರಿಗೆ ಉದ್ಯೋಗ ಭರವಸೆ ಪ್ರಮಾಣ ಪತ್ರ ವಿತರಣೆ ಮಾಡಿದ್ದಾರೆ. ಜನವರಿ 10ರಂದು ಈ ಕುಟುಂಬಕ್ಕೆ 466 ಗ್ರಾಂ ಬಂಗಾರದ ನಿಧಿ ದೊರಕಿತ್ತು. ಪ್ರಾಮಾಣಿಕತೆಯಿಂದ ರಿತ್ತಿ ಕುಟುಂಬಸ್ಥರು ಚಿನ್ನದ ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ್ದರು. ಇದಾದ ಬಳಿಕ ಸಂಪೂರ್ಣ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ನಡೆಸಲಾಗುತ್ತಿದ್ದು ಅನೇಕ ಐತಿಹಾಸಿಕ ಅವಶೇಷಗಳು ದೊರಕುತ್ತಲೇ ಇವೆ.

Scroll to Top