ಮೇ 20ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತ? ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಘೋಷಣೆ

ವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

ಕರ್ನಾಟಕ ಸರಕಾರ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡಿತ್ತು. ಆದ್ರೆ ರಾಜ್ಯ ಸರಕಾರದ ವಿರುದ್ದವೇ ಇದೀಗ ಸಾರಿಗೆ ನೌಕರರು ಸಿಡಿದೆದ್ದಿದ್ದಾರೆ. ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಮೇ 20 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿದೆ.

ಸಾರಿಗೆ ನೌಕರರು ಶೇ. 25ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಸರ್ಕಾರ ಕೇವಲ ಶೇ.12.50ರಷ್ಟು ಹೆಚ್ಚಳಕ್ಕೆ ಮಾತ್ರ ಆದೇಶ ನೀಡಿದೆ. ಇದುವರೆಗೆ 38 ತಿಂಗಳ ಹಿಂಬಾಕಿ ವೇತನ ನೀಡಬೇಕೆಂಬ ಬೇಡಿಕೆಯಿಟ್ಟಿದ್ದರೂ ಕೂಡ ರಾಜ್ಯ ಸರಕಾರ ಕೇವಲ 26 ತಿಂಗಳ ಪಾವತಿಗೆ ಮಾತ್ರವೇ ಒಪ್ಪಿಗೆ ನೀಡಿದೆ. ಸರ್ಕಾರಿ ನೌಕರರಿಗೆ ಶೇ. 27.5ರಷ್ಟು ವೇತನ ಹೆಚ್ಚಳಕ್ಕೆ ಒಪ್ಪಿರುವ ಸರ್ಕಾರ, ಸಾರಿಗೆ ನೌಕರರನ್ನು ಮಾತ್ರ ಕಡೆಗಣಿಸುತ್ತಿದೆ ಎಂಬುದು ಕಾರ್ಮಿಕ ಸಂಘಟನೆಗಳ ಆರೋಪ.

ಇದನ್ನೂ ಓದಿ : ಪೋಸ್ಟ್ ಆಫೀಸ್ ಚೆಕ್‌ಬುಕ್‌ಗೆ ಹೊಸ ನಿಯಮ! ಮೊಬೈಲ್ ನಂಬರ್ ಲಿಂಕ್ ಇದ್ದರೆ ಮಾತ್ರ ಸೌಲಭ್ಯ

ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿ ಸಾರಿಗೆ ನೌಕರರ ಪ್ರತಿಭಟನೆ ಇನ್ನಷ್ಟು ವಿಭಿನ್ನವಾಗಿರಲಿದೆ ಎಂದು ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್ ಫೆಡರೇಷನ್‌ ತಿಳಿಸಿದೆ. ನೌಕರರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸುವ ಬದಲಿಗೆ, ಕೆಲಸಕ್ಕೆ ಹಾಜರಾಗದೆ ತಮ್ಮ ಮನೆಯಲ್ಲೇ ಉಳಿದು ಮುಷ್ಕರ ಬೆಂಬಲಿಸಲಿದ್ದಾರೆ. ಬಿಎಂಟಿಸಿ (BMTC), ಕೆಎಸ್‌ಆರ್‌ಟಿಸಿ (KSRTC), ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಸುಮಾರು 1.15 ಲಕ್ಷ ಸಿಬ್ಬಂದಿ ಈ ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮೇ 20ರ ಬೆಳಿಗ್ಗೆ 6 ಗಂಟೆಯಿಂದಲೇ ಬಸ್‌ಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ : ಸಾಮಾನ್ಯ ಪೆಟ್ರೋಲ್ vs ಪ್ರೀಮಿಯಂ ಪೆಟ್ರೋಲ್ ವ್ಯತ್ಯಾಸ ಏನು ಗೊತ್ತ

ರಾಜ್ಯಾದ್ಯಂತ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕಚೇರಿಗೆ ತೆರಳುವ ನೌಕರರು ಮಾತ್ರವಲ್ಲದೇ ಸಾಮಾನ್ಯ ಪ್ರಯಾಣಿಕರಿಗೆ ದೊಡ್ಡ ಮಟ್ಟದ ತೊಂದರೆಯಾಗಲಿದೆ. ಅದರಲ್ಲೂ ವಿಶೇಷವಾಗಿ ‘ಶಕ್ತಿ’ ಯೋಜನೆಯಡಿ ಉಚಿತ ಪ್ರಯಾಣದ ಲಾಭ ಪಡೆಯುತ್ತಿರುವ ಮಹಿಳೆಯರಿಗೆ ಬಸ್‌ಗಳ ಸಮಸ್ಯೆ ದೊಡ್ಡ ಹೊಡೆತಕೊಡಲಿದೆ. ಸರ್ಕಾರ ನೌಕರರ ಮೇಲೆ ದೌರ್ಜನ್ಯ ಎಸಗುತ್ತಿದೆ. ಕಳೆದ ಬಾರಿ ಶೇ. 15ರಷ್ಟು ಹೆಚ್ಚಳ ಮಾಡಿದ್ದ ಸರ್ಕಾರ, ಈ ಬಾರಿ ಅದನ್ನು ಕಡಿಮೆ ಮಾಡಿರುವುದು ನಮಗೆ ಮಾಡಿದ ಅನ್ಯಾಯ. ಹೀಗಾಗಿ ಹೋರಾಟ ಅನಿವಾರ್ಯ ಎಂದು ಸಮಿತಿಯ ಮುಖಂಡರು ತಿಳಿಸಿದ್ದಾರೆ.

 

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories