ಚಿಕ್ಕಮಗಳೂರು: ಮನೆ ಮೇಲೆ ಕಲ್ಲು ತೂರಾಟ ಪ್ರಕರಣ, ಬಜರಂಗದಳ-SDPI ಮುಖಾಮುಖಿ; ಬಿಗುವಿನ ವಾತಾವರಣ

Chikkamagaluru communal tension: ಚಿಕ್ಕಮಗಳೂರು: ಕಾಫಿನಾಡಿನ ವಿಜಯನಗರ ಬಡಾವಣೆಯಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ಕಲ್ಲು ತೂರಾಟದ ಘಟನೆ ಈಗ ಕೋಮು ಸಂಘರ್ಷದ ರೂಪ ಪಡೆದಿದೆ. ಸೋಮವಾರ ರಾತ್ರಿ ಎರಡು ಸಮುದಾಯಗಳ ನಡುವೆ ತೀವ್ರ ಮಾತಿನ ಚಕಮಕಿ ಮತ್ತು ಹೈಡ್ರಾಮಾ ನಡೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬಸವನಹಳ್ಳಿ ಪೊಲೀಸ್ ಠಾಣೆ ಹಾಗೂ ಜಿಲ್ಲಾಸ್ಪತ್ರೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಘಟನೆಯ ಹಿನ್ನೆಲೆ:

ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಸಮೀಪವಿರುವ ಸುಧಾ ಎಂಬುವವರ ಮನೆಗೆ ಕಳೆದ ಒಂದು ವಾರದಿಂದ ರಾತ್ರಿ ವೇಳೆ ಅಪರಿಚಿತರು ಕಲ್ಲು ಎಸೆಯುತ್ತಿದ್ದರು ಎನ್ನಲಾಗಿದೆ. ಸೋಮವಾರ ರಾತ್ರಿಯೂ ಕಲ್ಲು ತೂರಾಟ ಮುಂದುವರಿದಾಗ, ಸಂತ್ರಸ್ತ ಕುಟುಂಬದವರು ಮತ್ತು ಸ್ಥಳೀಯರು ಇಬ್ಬರು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಉಳಿದ ನಾಲ್ವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಠಾಣೆ ಎದುರು ಹೈಡ್ರಾಮಾ:

ಕಲ್ಲು ತೂರಾಟದ ವಿಚಾರ ತಿಳಿಯುತ್ತಿದ್ದಂತೆ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರು ಬಸವನಹಳ್ಳಿ ಪೊಲೀಸ್ ಠಾಣೆ ಎದುರು ಜಮಾಯಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಇದೇ ವೇಳೆ, ಮುಸ್ಲಿಂ ಯುವಕರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ SDPI ಮುಖಂಡರು ಮತ್ತು ಕಾರ್ಯಕರ್ತರು ಕೂಡ ಸ್ಥಳಕ್ಕೆ ಆಗಮಿಸಿದರು. ಇದರಿಂದಾಗಿ ಎರಡು ಗುಂಪುಗಳ ನಡುವೆ ಜಗಳ ಉಂಟಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

PM KISAN 22nd Instalment: 9 ಕೋಟಿ ರೈತರಿಗೆ ಬಿಗ್ ಅಪ್‌ಡೇಟ್; ಹಣ ಜಮಾ ಯಾವಾಗ?

ಪರಸ್ಪರ ಆರೋಪ-ಪ್ರತ್ಯಾರೋಪ:

ಪೊಲೀಸ್ ಕ್ರಮ:

ಪರಿಸ್ಥಿತಿ ಕೈಮೀರದಂತೆ ತಡೆಯಲು ಎಂ.ಎಸ್.ಪಿ. ಜಯಕುಮಾರ್ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಸದ್ಯ ನಗರದಲ್ಲಿ ಶಾಂತಿ ಕಾಪಾಡಲು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ತನಿಖೆ ಮುಂದುವರಿಸಿದ್ದಾರೆ.

Exit mobile version