ಪ್ರತೀ ಟನ್‌ ಕಬ್ಬಿಗೆ 3200 ರೂಪಾಯಿ : ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕಬ್ಬು ಬೆಳೆಗಾರರು ಕಬ್ಬಿಗೆ 3500 ರೂಪಾಯಿ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆಗೆ ಸರಕಾರ ಮಣಿದಿದೆ. ರಾಜ್ಯ ಸರಕಾರ ಪ್ರತೀ ಟನ್‌ ಕಬ್ಬಿಗೆ 3200 ರೂಪಾಯಿ ನೀಡಲು ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 12 ಸಕ್ಕರೆ ಕಾರ್ಖಾನೆಗಳು ಸರಕಾರ ಸುಪರ್ದಿಯಲ್ಲಿದೆ. ಉಳಿದ ಎಲ್ಲಾ ಕಾರ್ಖಾನೆಗಳು ಖಾಸಗಿ ಮಾಲೀಕತ್ವವನ್ನು ಹೊಂದಿವೆ. ರೈತರು ಪ್ರತೀ ಟನ್‌ ಕಬ್ಬಿಗೆ 3500 ರೂಪಾಯಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು.

ಕೇಂದ್ರ ಸರಕಾರಕ್ಕೆ ರೈತರ ಬೇಡಿಕೆಯ ಕುರಿತು ಪತ್ರ ಬರೆದಿದ್ದೇನೆ. ಬೆಳಗಿನಿಂದ ಸಂಜೆಯವರೆಗೂ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗೆ ಚರ್ಚಿಸಿ ಒಂದು ತೀರ್ಮಾನಕ್ಕೆ ಬಂದಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಬ್ಬಿನ ಕಾರ್ಖಾನೆಯ ಮಾಲೀಕರ ಜೊತೆ ಸಿಎಂ ಸಭೆ : ಹೆಡ್‌ಲೈನ್ಸ್‌

ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಬೇಕು ಎಂದು ಕಾರ್ಖಾನೆ ಮಾಲೀಕರು ಮನವಿ ಮಾಡಿದ್ದು, ಇದರ ಮರು ಪರಿಶೀಲನೆ ನಡೆಸಲಾಗುವುದು.

ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು.

CM Siddaramaiah Announces Rs 3,200 Per Ton for Sugarcane in Karnataka

Exit mobile version