CM Siddaramaiah show of strength: ನಾಳೆ ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿಪ್ರದರ್ಶನ : ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಕಲರವ
CM Siddaramaiah show of strength: ರಾಜ್ಯದಲ್ಲಿ ಅಧಿಕಾರ ಹಸ್ತಾಂತರದ ಹಾವು ಏಣಿ ಆಟ ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ(BJP) ಭಧ್ರಕೋಟೆ ಎನಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ನಾಳೆ ಮಂಗಳೂರಿನಲ್ಲಿ ನಾರಾಯಣ ಗುರು-ಗಾಂಧಿ ಐತಿಹಾಸಿಕ ಸಂವಾದದ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು ರಾಷ್ಟ್ರೀಯ ಕಾಂಗ್ರೆಸ್ ಮುಖಂಡ ಕೆಸಿ ವೇಣುಗೋಪಾಲ್ ಅವರೊಂದಿಗೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಈ ಕಾರ್ಯಕ್ರಮ ಆಯೋಜನೆಯ ನೇತೃತ್ವವನ್ನು ಶಾಸಕ ಯು.ಟಿ ಖಾದರ್ ಹಾಗೂ ಬಿ.ಕೆ ಹರಿಪ್ರಸಾದ್ಗೆ ನೀಡಲಾಗಿದೆ ಎನ್ನಲಾಗಿದ್ದು ಸಾಕಷ್ಟು ಜನರನ್ನು ಸಮಾವೇಶಕ್ಕೆ ಸೇರಿಸುವಂತೆ ಜಿಲ್ಲಾ ಕಾಂಗ್ರೆಸ್ಗೆ ಸೂಚನೆ ನೀಡಲಾಗಿದೆ. ಬಿಜೆಪಿ ಭದ್ರಕೋಟೆಯಲ್ಲಿ ತಮ್ಮ ಶಕ್ತಿ ಪ್ರದರ್ಶನದ ಮೂಲಕ ಹೈಕಮಾಂಡ್ಗೆ ಸಂದೇಶ ಕಳುಹಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಎನ್ನಲಾಗಿದೆ.
ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ, 11:40ಕ್ಕೆ ಉಳ್ಳಾಲ ತಾಲೂಕಿನ ಕೊಣಾಜೆ ಮಂಗಳ ಗಂಗೋತ್ರಿಯಲ್ಲಿ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು ಹಾಗೂ ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ , ಶ್ರೀ ಗುರುವಿನ ಮಹಾ ಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನದ ಶತಮಾನೋತ್ಸವ ಹಾಗೂ ಯತಿ ಪೂಜೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
Also Read: ಮಟನ್ಗಿಂತಲೂ ಹೆಚ್ಚಾಯ್ತು ನುಗ್ಗೆಕಾಯಿ ದರ : ಕೆಜಿ ನುಗ್ಗೆಕಾಯಿ ಈಗ 600 ರೂಪಾಯಿ..!
ಒಂದಾದ ಬಳಿಕ 12:30ಲ್ಲೆ ಪೇಸ್ ಮತ್ತು ಎ.ಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ,ಪೇಸ್ ಟ್ರೈಡ್ ಪಾರ್ಕ್ ಮತ್ತು ಪೇಸ್ ಸ್ಪೋಟ್ರ್ಸ್ ಅರೆನಾ ಇದರ ಶಿಲಾನ್ಯಾಸ ಹಾಗೂ ಪೇಸ್ಕೇರ್ಸ್ ಸಮುದಾಯ ಸೇವಾ ಯೋಜನೆಗಳು ಉದ್ಘಾಟನಾ ಸಮಾರಂಭವನ್ನು ನೆರವೇರಿಸಲಿದ್ದಾರೆ.
ಮಧ್ಯಾಹ್ನ 1:15ಕ್ಕೆ ನಗರದ ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ವಕೀಲರ ಬಾರ್ ಅಸೋಸಿಯೇಷನ್ ಭೇಟಿ ಮಾಡಿ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಜೆ 4:30ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ.



