ಆಂಧ್ರಪ್ರದೇಶದಲ್ಲಿ ಕೋವಿಡ್​ ಮರಣ ಮೃದಂಗ : ಕರ್ನಾಟಕ ಗಡಿಯಲ್ಲಿ ತೀವ್ರ ತಪಾಸಣೆ

ಕರ್ನಾಟಕದಲ್ಲಿಯೂ ಈಗಾಗಲೇ 32 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 193 ಜನ ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 32 ಜನರಿಗೆ ಕೊರೊನಾ ಇರುವುದು ಕನ್ಪರ್ಮ್​ ಆಗಿದೆ.

ಬೆಂಗಳೂರು : ಕೋವಿಡ್​ ಆತಂಕ ವಿಶ್ವದಾದ್ಯಂತ ಸಂಪೂರ್ಣ ಮರೆಯಾಯ್ತು ಎಂದು ನಿಟ್ಟುಸಿರು ಬಿಡುವಾಗಲೇ ಮತ್ತೊಮ್ಮೆ ದಕ್ಷಿಣ ಭಾರತದಲ್ಲಿ ಕೊರೊನಾ ತಾಂಡವ ಆರಂಭಗೊಂಡಿದೆ. ಆಂಧ್ರಪ್ರದೇಶದಲ್ಲಿ ಕೋವಿಡ್​ ಭೀತಿ ಭೀಕರವಾಗಿದ್ದು, ರಾಜ್ಯದಲ್ಲಿಯೂ ಆತಂಕ ಮನೆ ಮಾಡಿದೆ. ಆಂಧ್ರ ಪ್ರದೇಶದಲ್ಲಿ ಈಗಾಗಲೇ ಕೊರೊನಾ ಮಹಾಮಾರಿಯಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್​ ಆಗಿದೆ.

ಕರ್ನಾಟಕದಲ್ಲಿಯೂ ಈಗಾಗಲೇ 32 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 193 ಜನ ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 32 ಜನರಿಗೆ ಕೊರೊನಾ ಇರುವುದು ಕನ್ಪರ್ಮ್​ ಆಗಿದೆ. ಸೋಂಕಿತರ ಸಂಖ್ಯೆ ಹೆಚ್ಚದಂತೆ ಆರೋಗ್ಯ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿದೆ. ಅಲ್ಲದೇ ಆಂಧ್ರಪ್ರದೇಶದ ಗಡಿಯಿಂದ ರಾಜ್ಯ ಪ್ರವೇಶಿಸುವವರ ಮೇಲೆ ನಿಗಾ ಇಡಲಾಗಿದ್ದು, ಪಾವಗಡದಲ್ಲಿ ಚೆಕ್​ಪೋಸ್ಟ್​ ನಿರ್ಮಾಣ ಮಾಡಲಾಗಿದೆ .

ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ನಾಗಲಮಡಿಕೆ,ರಾಜವಂತಿ ಹಾಗೂ ಕೊಡಮಡಗು ಗಡಿ ಭಾಗಗಳಲ್ಲಿ ರಾಜ್ಯಕ್ಕೆ ಪ್ರವೇಶಿಸುವವರನ್ನು ಥರ್ಮಲ್​ ಸ್ಕ್ರೀನಿಂಗ್​ಗೆ ಒಳಪಡಿಸಲಾಗುತ್ತಿದೆ. ತಾಪಮಾನ ಏರಿಳಿತ ಕಂಡುಬರುವವರಿಗೆ ಕರ್ನಾಟಕಕ್ಕೆ ಪ್ರವೇಶ ನಿರ್ಬಂಧಿಸಲಾಗುತ್ತಿದೆ.

ಇನ್ನು ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ ಒಟ್ಟೂ 32 ಸೋಂಕಿತರ ಪ್ರಕರಣ ವರದಿಯಾಗಿರುವ ವಿಚಾರವಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕೊರೊನಾ ಮಹಾಮಾರಿ ಮುಗಿದ ಬಳಿಕವೂ ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ವರದಿಯಾಗುತ್ತಲೇ ಇರುತ್ತದೆ. ಇದರ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತೆ ವಹಿಸಿ ಎಂದು ಸೂಚನೆ ನೀಡಿದೆ.

covid-19 Andhra Pradesh pandemic Karnataka Border high Alert

Exit mobile version