Coronavirus : ಕರ್ನಾಟಕದಲ್ಲೂ ಕೊರೊನಾ ಆರ್ಭಟ, 32 ಮಂದಿ ಕೋವಿಡ್‌ ದೃಢ

ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಕೋವಿಡ್‌ ಮಹಾಮಾರಿ ಆತಂಕವನ್ನು ಸೃಷ್ಟಿಸಿದ್ದು, ಈಗಾಗಲೇ ಇಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಸುದ್ದಿ ವೈರಲ್‌ ಆಗಿತ್ತು.

ಬೆಂಗಳೂರು : ಆಂಧ್ರಪ್ರದೇಶದಲ್ಲಿ ಕೊರೊನಾ ಮಹಾಮಾರಿಗೆ ಇಬ್ಬರು ಬಲಿಯಾದ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಕೋವಿಡ್‌ ಸೋಂಕು ವ್ಯಾಪಕವಾಗಿ ಹರಡುವ ಆತಂಕ ಶುರುವಾಗಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿ ಬರೋಬ್ಬರಿ 32 ಜನರಿಗೆ ಕೋವಿಡ್‌ ಸೋಂಕು ಇರುವುದು ದೃಢಪಟ್ಟಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕೆಯನ್ನು ಕೈಗೊಂಡಿದೆ.

ಕಳೆದ ನಾಲ್ಕು ವರ್ಷಗಳ ಹಿಂದೆಯಷ್ಟೇ ಇಡೀ ಜಗತ್ತನ್ನೇ ಕೊರೊನಾ ವೈರಸ್‌ ತಲ್ಲಣಗೊಳಿಸಿತ್ತು. ಇದರ ಬೆನ್ನಲ್ಲೆ ಇದೀಗ ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಕೋವಿಡ್‌ ಮಹಾಮಾರಿ ಆತಂಕವನ್ನು ಸೃಷ್ಟಿಸಿದ್ದು, ಈಗಾಗಲೇ ಇಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಸುದ್ದಿ ವೈರಲ್‌ ಆಗಿತ್ತು.

ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ನಡೆದಿರುವ ಈ ಕೊರೊನಾ ಸಾವಿನ ಸುದ್ದಿ ಎಲ್ಲೆಡೆ ವೈರಲ್‌ ಆಗಿತ್ತು. ಹೊಸ ರೂಪಾಂತರದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸ್ಯಾಂಪಲ್‌ ಗಳನ್ನು ಈಗಾಗಲೇ ಲ್ಯಾಬ್‌ಗೆ ಕಳುಹಿಸಲಾಗಿದೆ. ಮತ್ತೊಂದೆಡೆಯಲ್ಲಿ ಕರ್ನಾಟಕ ರಾಜ್ಯದಲ್ಲಿಯೂ ಕೊರೊನಾ ಸೊಂಕು ವ್ಯಾಪಕವಾಗಿ ಹರಡುವವ ಆತಂಕ ಶುರುವಾಗಿದೆ. ಕಳೆದ ಜೂನ್‌ ತಿಂಗಳಿನಲ್ಲಿ ಕೇವಲ 14 ಮಂದಿಗೆ ಕೋವಿಡ್‌ ಪಾಸಿಟಿವ್‌ ಆಗಿತ್ತು.

ಆದರೆ ಜುಲೈ ತಿಂಗಳನ ಆರಂಭದ 10 ದಿನಗಳಲ್ಲೇ ಸೋಂಕಿತರ ಪ್ರಮಾಣ ಬರೋಬ್ಬರಿ 32ಕ್ಕೆ ಏರಿಕೆ ಕಂಡಿದೆ. ಅದ್ರಲ್ಲೂ 193 ಮಂದಿ ಸೋಂಕಿತರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಿದ ಸಂದರ್ಭದಲ್ಲಿ 32 ಮಂದಿಗೆ ಕೋವಿಡ್‌ ಸೋಂಕು ಖಚಿತವಾಗಿದೆ.

ಆಂಧ್ರ ಪ್ರದೇಶದಲ್ಲಿ ನಡೆದಿರುವ ಕೋವಿಡ್‌ ಸೋಂಕಿತರ ಸಾವಿನ ಕುರಿತಂತೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮಾಹಿತಿಯನ್ನು ಪಡೆಯುತ್ತಿದೆ. ಕರ್ನಾಟಕದಲ್ಲಿ ಕೋವಿಡ್‌ ಸೋಂಕು ಅಷ್ಟೊಂದು ಅಪಾಯಕಾರಿಯಾಗಿಲ್ಲ, ಹೀಗಾಗಿ ಭಯ ಪಡುವ ಅಗ್ಯವಿಲ್ಲ ಎಂದು ಆರೋಗ್ಯ ಇಲಾಕೆಯ ಆಯುಕ್ತರಾದ ಗುರುದತ್‌ ಹೆಗಡೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

covid fear karnataka coronavirus cases rises after andhra pradesh

Exit mobile version