ಸಿಟಿ. ರವಿಗೆ ನೋಟಿಸ್ ಜಾರಿ ವಿಚಾರ : ಕಾಂಗ್ರೆಸ್ ಸರಕಾರದ ವಿರುದ್ಧ ವಿ. ಸುನಿಲ್ ಕುಮಾರ್ ವಾಗ್ದಾಳಿ
ವಿ. ಸುನಿಲ್ ಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ ಹೈಕೋರ್ಟ್ ಪೊಲೀಸರ ಕಾರ್ಯವೈಖರಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕವೂ ರಾಜ್ಯ ಸರ್ಕಾರದ ಸೂಚನೆಯಂತೆ ಪೊಲೀಸ್ ಇಲಾಖೆ ವಿರೋಧಿ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಉಡುಪಿ : ಮಾಜಿ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ನೋಟಿಸ್ ನೀಡಲು ರಾಜ್ಯ ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮವನ್ನು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.
ಟ್ವೀಟರ್ನಲ್ಲಿ ಪೋಸ್ಟ್ ಮಾಡುವ ಮೂಲಕ ವಿ. ಸುನಿಲ್ ಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ ಹೈಕೋರ್ಟ್ ಪೊಲೀಸರ ಕಾರ್ಯವೈಖರಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕವೂ ರಾಜ್ಯ ಸರ್ಕಾರದ ಸೂಚನೆಯಂತೆ ಪೊಲೀಸ್ ಇಲಾಖೆ ವಿರೋಧಿ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಸಿ.ಟಿ. ರವಿ ವಿರುದ್ಧ ಯಾವುದೇ ದುರುದ್ದೇಶಪೂರಿತ ಕ್ರಮವನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ ಅವರು, ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಎಲ್ಲರಿಗೂ ಸಮಾನವಾಗಿದ್ದು, ಅದು ಸಿ.ಟಿ. ರವಿ ಅವರಿಗೂ ಅನ್ವಯಿಸುತ್ತದೆ ಎಂದು ತಿಳಿಸಿದ್ದಾರೆ..
ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉದ್ದೇಶಿಸಿ ಮಾತನಾಡಿದ ಸುನಿಲ್ ಕುಮಾರ್, ದೇಶ, ಚುನಾಯಿತ ಸರ್ಕಾರ ಹಾಗೂ ಹಿಂದೂ ವಿಚಾರಧಾರೆಗಳ ವಿರುದ್ಧ ಮಾತನಾಡುವವರ ಬಗ್ಗೆ ಸರ್ಕಾರ ಮೌನ ವಹಿಸುತ್ತಿದೆ ಎಂದು ಆರೋಪಿಸಿದರು. ಕ್ರಿಮಿನಲ್ಗಳನ್ನು ಬಂಧಿಸುವ ಬದಲು ಸಾಮಾಜಿಕ ಜಾಲತಾಣಗಳ ಪೋಸ್ಟ್ಗಳು ಹಾಗೂ ಭಾಷಣಗಳಲ್ಲಿನ ಹೇಳಿಕೆಗಳನ್ನು ಆಧರಿಸಿ ಕ್ರಮ ಕೈಗೊಳ್ಳಲು ಪೊಲೀಸ್ ಪಡೆಯನ್ನು ಬಳಸಿಕೊಳ್ಳಲಾಗುತ್ತಿದೆ.
ಮಾಜಿ ಸಚಿವ @CTRavi_BJP ಯವರಿಗೆ ನೋಟಿಸ್ ನೀಡಲು ಹೋದ ರಾಜ್ಯ ಪೊಲೀಸ್ ಇಲಾಖೆಯ ಕ್ರಮವನ್ನು ಉಗ್ರವಾಗಿ ಖಂಡಿಸುತ್ತೇನೆ. ಪೊಲೀಸರ ಕಾರ್ಯ ವೈಖರಿ ಬಗ್ಗೆ ಖುದ್ದು ರಾಜ್ಯ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ ನಂತರವೂ ಖಾಕಿಧಾರಿಗಳು ಆಳುವ ಸರ್ಕಾರದ ಆಳುಗಳಾಗಿ ವಿರೋಧಿ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಸಿ.ಟಿ.ರವಿ ಅವರ ವಿರುದ್ಧ…
— Sunil Kumar Karkala (@karkalasunil) July 26, 2026
ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆಗೆ ಸಂಬಂಧಿಸಿದ ಗಂಭೀರ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಆಗ್ರಹಿಸಿದ ಅವರು, ಅಧಿಕಾರ ಶಾಶ್ವತವಲ್ಲ ಎಂಬುದನ್ನು ಸರ್ಕಾರ ನೆನಪಿಟ್ಟುಕೊಳ್ಳಬೇಕು ಎಂದು ಎಚ್ಚರಿಸಿದರು. ಪ್ರಸ್ತುತ ಸರ್ಕಾರದ ಅವಧಿ ಕೊನೆಯ ಹಂತದತ್ತ ಸಾಗುತ್ತಿದ್ದು, ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
CT Ravi Notice Issue Karkala MLA VR Sunil Kumar Reaction Against Karnataka Congress Government Outrage

