Cyclone Alert : ಸೈಕ್ಲೋನ್ ಎಫೆಕ್ಟ್ ಮುಂದಿನ 5 ದಿನ 14 ಜಿಲ್ಲೆಗಳಿಗೆ ಬಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಇಂದಿನಿಂದ ಜುಲೈ 31ರವರೆಗೆ ಒಟ್ಟು ಐದು ದಿನಗಳ ಕಾಲ ರಾಜ್ಯದ ಸುಮಾರು 14 ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ಈ ಪ್ರದೇಶಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ.

Cyclone Alert : ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಒಡಿಶಾ ಕರಾವಳಿ ಭಾಗದಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕಾಗುವ ಮುನ್ಸೂಚನೆ ಸಿಕ್ಕಿದೆ. ಮುಂದಿನ ಐದು ದಿನಗಳ ಕಾಲ ಬಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಮುದ್ರ ಮಟ್ಟದಲ್ಲಿ ಉಂಟಾಗಿರುವ ಈ ಚಂಡಮಾರುತದ ಪ್ರಸರಣವು ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ಆಳವಾಗಿ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಇದರ ನೇರ ಪ್ರಭಾವ ರಾಜ್ಯದ ಹವಾಮಾನದ ಮೇಲಾಗಲಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಜುಲೈ 31ರವರೆಗೆ ಒಟ್ಟು ಐದು ದಿನಗಳ ಕಾಲ ರಾಜ್ಯದ ಸುಮಾರು 14 ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ಈ ಪ್ರದೇಶಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಹಾವೇರಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಬಳಿಕ ಮಳೆಯ ಪ್ರಭಾವ ತುಸು ತಗ್ಗಲಿದ್ದರೂ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ದಿನವಿಡೀ ಮಬ್ಬು ವಾತಾವರಣದೊಂದಿಗೆ ಜಿಟಿಜಿಟಿ ಮಳೆ ಮುಂದುವರಿಯಲಿದೆ. ಆದರೆ, ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಾತ್ರ ಸದ್ಯಕ್ಕೆ ಮಳೆ ಕಣ್ಮರೆಯಾಗಿದ್ದು, ಮುಂದಿನ ಒಂದು ವಾರ ಕಾಲ ಆಗಾಗ ಬಿಸಿಲಿನ ದರ್ಶನದೊಂದಿಗೆ ಕೇವಲ ಹಗುರ ಮಳೆಯಷ್ಟೇ ಬೀಳಲಿದೆ ಎಂದು ವರದಿಯಾಗಿದೆ.

ಮತ್ತೊಂದೆಡೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಭಾರಿ ಮಳೆ ಸುರಿಯದಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಧಾರವಾಡ, ಹಾವೇರಿ, ಗದಗ, ರಾಯಚೂರು, ಕೊಪ್ಪಳ ಮುಂತಾದ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದ್ದು, ಎರಡು ತಿಂಗಳ ಮುಂಗಾರಿಗೆ ಮಳೆ ಹಾವೇರಿ, ಧಾರವಾಡ, ಗದಗ, ಕೊಪ್ಪಳ ಹಾಗೂ ರಾಯಚೂರು ಭಾಗಗಳಲ್ಲಿ ಕೇವಲ ಸೋನೆ ಅಥವಾ ತುಂತುರು ಮಳೆಯಾಗುತ್ತಿರುವುದರಿಂದ ಎರಡು ತಿಂಗಳ ಮುಂಗಾರು ಪೈರುಗಳಿಗೆ ನೀರಿನ ಕೊರತೆ ಎದುರಾಗಿದೆ.

ಜೂನ್ ತಿಂಗಳಲ್ಲಿ ಬಿತ್ತನೆ ಮಾಡಿದ್ದ ಬೆಳೆಗಳು ಈಗಷ್ಟೇ ಮೊಳಕೆ ಒಡೆದು ಸಸಿಯಾಗಿದ್ದು, ಜೋರು ಮಳೆಯಿಲ್ಲದೆ ಒಣಗುವ ಸ್ಥಿತಿ ತಲುಪಿವೆ. ಹವಾಮಾನ ಇಲಾಖೆಯ ಈ ವಾಯುಭಾರ ಕುಸಿತದ ಮುನ್ಸೂಚನೆಯು ಕನಿಷ್ಠ ಮುಂದಿನ ದಿನಗಳಲ್ಲಾದರೂ ಉತ್ತಮ ಮಳೆ ತರಬಹುದು ಎಂಬ ನಿರೀಕ್ಷೆಯಲ್ಲಿ ಒಳನಾಡಿನ ಅನ್ನದಾತರು ಕಾಯುತ್ತಿದ್ದಾರೆ.

Cyclone Alert These 14 Karnataka Districts to Face Heavy Rainfall for the Next 5 Days

Exit mobile version