Cyclone Montha: ಮೋಂಥಾ ಚಂಡಮಾರುತ : 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಕರಾವಳಿಯಲ್ಲಿ ಕಟ್ಟೆಚ್ಚರ
ಬೆಂಗಳೂರು: Cyclone Montha: ಕರ್ನಾಟಕಕ್ಕೂ ಮೋಂಥಾ ಚಂಡಮಾರುತದ ಎಫೆಕ್ಟ್ ತಟ್ಟಲಿದೆ. ಕರಾವಳಿ, ಮಲೆನಾಡು ಸೇರಿದಂತೆ ಕರ್ನಾಟಕ 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಗಳ್ಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಮೋಂಥಾ ಚಂಡಮಾರುತದ ಪ್ರಭಾವದಿಂದಾಗಿ ಕರಾವಳಿ ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.
11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದ ಒಟ್ಟು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ, ಮತ್ತು ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Also Read: Hassan : 2 ಮನೆಗಳ ಗೋಡೆ ಕುಸಿತ, ಮಹಿಳೆ ಸಾವು
ಕರಾವಳಿಯಲ್ಲಿ ಕಟ್ಟೆಚ್ಚರ..!
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವ ಕಾರಣ, ಇಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಹಾಗೂ ಬಿರುಗಾಳಿ (ಗಂಟೆಗೆ 40-50 ಕಿ.ಮೀ.) ಬೀಸುವ ಸಾಧ್ಯತೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು(Bengaluru) ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಹವಾಮಾನ ವೈಪರೀತ್ಯದಿಂದಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.
Also Read: ಸಿಎಂ ಸಿದ್ದರಾಮಯ್ಯ ಔತಣ ಕೂಟ : ಯಾರಿಗೆ ಬೀಳ್ಕೊಡುಗೆ ?



