ಧರ್ಮಸ್ಥಳ ವಿಚಾರದಲ್ಲಿ ಸರಕಾರ ಏನು ಮಾಡುತ್ತಿದೆ ? ಶ್ರದ್ದಾ ಕೇಂದ್ರದ ಮೇಲೆ ಯೋಚಿತ ಅಪಪ್ರಚಾರ : ಶಾಸಕ ಸುನಿಲ್ ಕುಮಾರ್

ಕಾರ್ಕಳ : ಧರ್ಮಸ್ಥಳದಲ್ಲಿ ನಡೆದ ಮಾಧ್ಯಮದವರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರವನ್ನು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಅವರು ಸರಕಾರ ಹಾಗೂ ಪೊಲೀಸ್ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಧರ್ಮಸ್ಥಳದ ವಿಚಾರದಲ್ಲಿ ರಾಜ್ಯ ಸರಕಾರ ಏನು ಮಾಡುತ್ತಿದೆ ? ಇದೇನು ತನಿಖೆಯೋ ? ದೊಂಬಿಯೋ ? ಎಂದ ಅವರು, ಹಿಂದೂಗಳ ಶ್ರದ್ದಾ ಕೇಂದ್ರದ ಮೇಲೆ ನಡೆಯುತ್ತಿರುವ ಯೋಚಿತ ಅಪಪ್ರಚಾರದಲ್ಲಿ ಕಾಂಗ್ರೆಸ್ ಸರಕಾರ ಯೂ ಟ್ಯೂಬರ್‌ಗಳು ಹಾಗೂ ಅನ್ಯಮತೀಯರ ಕೈಗೊಂಬೆಯಾಗಿ ಕುಣಿಯುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದ ಪ್ರಮುಖ ವಾಹಿನಿಯ ವರದಿಗಾರರ ಮೇಲೆ, ಸ್ಥಳೀಯ ನಾಗರಿಕರ ಮೇಲೆ ಈ ಹೋರಾಟಗಾರರ ಸೋಗಿನಲ್ಲಿ ವ್ಯಕ್ತಿಗಳು, ಗೂಂಡಾಗಿರಿ ಮಾಡುತ್ತಿದ್ದರೂ ಪೊಲೀಸ್ ಇಲಾಖೆ ಏನು ಮಾಡುತ್ತಿದೆ. ಸಹನೆಗೂ ಒಂದು ಮಿತಿ ಇದೆ. ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ ಎಂದು ಎಚ್ಚರಿಸಿದ್ದಾರೆ.
Also Read : ಪರಶುರಾಮ ಮೂರ್ತಿ ಸ್ಥಾಪನೆಗೆ ವಾಹನ ಜಾಥಾ
ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆ ಚುರುಕು
ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಸಮಾಧಿ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಮುಂದುವರಿದಿದೆ. ದೂರುದಾರ ಒಟ್ಟು 13 ಸ್ಥಳಗಳನ್ನು ಗುರುತಿಸಿದ್ದು ಈ ಪೈಕಿ ಉತ್ಕನನ ಕಾರ್ಯ ಬಹುತೇಕ ಪೂರ್ಣಗೊಂಡಿದೆ.
ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಅಸ್ತಿ ಪಂಜರದ ಅವಶೇಷಗಳು ಪತ್ತೆಯಾಗಿದೆ ಎನ್ನಲಾಗುತ್ತಿದ್ದು, ಈ ಕುರಿತು ಎಸ್ಐಟಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಧರ್ಮಸ್ಥಳ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Also Read : ಕರ್ನಾಟಕದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು
Dharmasthala Case Karkala MLA Sunil Kumar Reaction



