ಮೊಟ್ಟೆಯಲ್ಲಿ ಕ್ಯಾನ್ಸರ್ಕಾರ ಅಂಶವಿಲ್ಲ : ಸ್ಪಷ್ಟನೆ ನೀಡಿದ ದಿನೇಶ್ ಗುಂಡೂರಾವ್
Dinesh Gundurao clarified: ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಆದರೆ ಇದೀಗ ಈ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದು ಮೊಟ್ಟೆ ಪ್ರಿಯರು ನಿಟ್ಟುಸಿರು ಬಿಡುವಂತಾಗಿದೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರ ಶುದ್ಧ ಸುಳ್ಳು ಎಂದು ಹೇಳಿದ್ದಾರೆ.
ರಾಜ್ಯದ ವಿವಿಧೆಡೆಗಳಿಂದ ಮೊಟ್ಟೆ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಎಲ್ಲಾ ಪರೀಕ್ಷೆಯ ವರದಿ ಬಂದಿದ್ದು ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್ಕಾರಕ ಅಂಶಗಳಿಲ್ಲ, ಮೊಟ್ಟೆ ಸೇವನೆ ಸಂಪೂರ್ಣ ಸುರಕ್ಷಿತ ಎಂದು ಹೇಳಿದ್ದಾರೆ.
ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶ ಪತ್ತೆ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿಯೇ ರಾಜ್ಯದ ಮೂಲೆ ಮೂಲೆಗಳಿಂದ ಮೊಟ್ಟೆಗಳನ್ನು ಸಂಗ್ರಹಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಸಾರ್ವಜನಿಕರು ಆತಂಕ ಪಡುವಂತಹ ಯಾವುದೇ ರೀತಿಯ ಪ್ರಾಣಕ್ಕೆ ಸಂಚಕಾರ ತರುವಂತಹ ಅಂಶ ಮೊಟ್ಟೆಯಲ್ಲಿಲ್ಲ. ಮೊಟ್ಟೆಯನ್ನು ಯಾವುದೇ ಭಯವಿಲ್ಲದೇ ಸೇವಿಸಿ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Also Read: ಸರ್ಕಾರಿ ರಜೆಗಳ ಪಟ್ಟಿ 2026: ಮುಂದಿನ ವರ್ಷ ಒಟ್ಟು 24 ಸಾರ್ವತ್ರಿಕ ರಜೆಗಳು; ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಮೊಟ್ಟೆ ಸೇವನೆ ಸುರಕ್ಷಿತ ಎಂದು ಎಫ್ಎಸ್ಎಸ್ಎಐ ಹೇಳಿದೆ. ಆದರೆ ಯಾರೋ ಜನರಲ್ಲಿ ಭಯ ಮೂಡಿಸುವ ಕೆಲಸ ಮಾಡಿದ್ದಾರೆ .ಮೊಟ್ಟೆಯಂತಹ ಪೌಷ್ಠಿಕ ಆಹಾರ ಬೇರೊಂದಿಲ್ಲ. ಹೀಗಾಗಿ ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳದೇ ನಿಶ್ಚಿಂತೆಯಿಂದ ಮೊಟ್ಟೆ ಸೇವಿಸಿ ಎಂದು ದಿನೇಶ್ ಗುಂಡೂರಾವ್ ಹೇಳಿದರು.



