ಡಿ.ಕೆ ಶಿವಕುಮಾರ್​ ದೆಹಲಿ ಪ್ರಯಾಣ.. ನಾಳಿನ ಸಚಿವ ಸಂಪುಟ ಸಭೆಗೆ ಗೈರು

DK Shivakumar: ರಾಜ್ಯದಲ್ಲಿ ನವೆಂಬರ್​ ಕ್ರಾಂತಿಯ ಕೂಗು ಜೋರಾಗಿದೆ. ಸಚಿವಾಕಾಂಕ್ಷಿಗಳು ಮಂತ್ರಸ್ಥಾನಗಿಟ್ಟಿಸಿಕೊಳ್ಳಲು ಓಡಾಡುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆಯ ವಿಚಾರ ಕೂಡ ಹರಿದಾಡುತ್ತಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಸಂಪುಟ ಸಭೆ ಮಹತ್ವದ ಪಾತ್ರ ವಹಿಸಿತ್ತು.

ನಾಳೆ ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟ ಸಭೆ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ನಡೆಯಲಿದೆ. ಆದರೆ ಈ ಬಾರಿ ಸಚಿವ ಸಂಪುಟ ಸಭೆಗೆ ಡಿಸಿಎಂ ಡಿ.ಕೆಶಿವಕುಮಾರ್​ ಗೈರಾಗಲಿದ್ದಾರೆ ಎನ್ನಲಾಗಿದೆ. ಮೇಕೆದಾಟು ಯೋಜನೆಯ ಸಂಬಂಧ ಸುಪ್ರೀಂ ಕೋರ್ಟ್​ನ ವಕೀಲರೊಂದಿಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಇಂದು ಡಿ.ಕೆ ಶಿವಕುಮಾರ್​ ದೆಹಲಿಗೆ ತೆರಳಿದ್ದಾರೆ.

ಇನ್ನು ಮೇಕೆದಾಟು ಯೋಜನೆಯನ್ನು ಎಂದಿನಿಂದಲೂ ಪ್ರತಿಪಾದಿಸುತ್ತಾ ಬಂದಿರುವ ಡಿಕೆಶಿವಕುಮಾರ್​ ರಾಜ್ಯ ರಾಜಧಾನಿ ಬೆಂಗಳೂರಿನ ನೀರಿನ ಸಮಸ್ಯೆಗಳಿಗೆ ಮೇಕೆದಾಟುವೊಂದೇ ಶಾಶ್ವತ ಪರಿಹಾರ ಎಂದು ನಂಬಿದ್ದಾರೆ. ಬೆಂಗಳೂರಿಗರಿಗೆ ಸಮರ್ಪಕ ಕುಡಿಯುವ ನೀರು ಒದಗಿಸುವುದರ ಜೊತೆಯಲ್ಲಿ ವಿದ್ಯುತ್​ ಉತ್ಪಾದನೆಗೂ ಈ ಯೋಜನೆ ಸಹಕಾರಿಯಾಗಲಿದೆ ಎಂದು ಡಿಕೆಶಿ ಹೇಳುತ್ತಲೇ ಬಂದಿದ್ದಾರೆ.

Also Read: ಗುಂಡಿ ಮುಚ್ಚಿಲ್ಲ- ಬಾಕಿ ಹಣ ಕೊಟ್ಟಿಲ್ಲ, ಸರಕಾರ ವಿರುದ್ದ ಜನಾಂದೋಲನ : ಆರ್‌.ಅಶೋಕ್‌

ಆದರೆ ತಮಿಳುನಾಡು ಈ ಯೋಜನೆಗೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ. ಹೀಗಾಗಿ ಮೇಕೆದಾಟು ಯೋಜನೆ ಅನುಷ್ಠಾನ ಸಾಧ್ಯವಾಗುತ್ತಿಲ್ಲ. ಸಮುದ್ರದ ನೀರು ಬಳಕೆ ಮಾಡಿ ಈ ಯೋಜನೆಯ ಲಾಭ ಪಡೆಯಲಾಗುತ್ತದೆ ಎಂದು ಮನವರಿಕೆ ಮಾಡಿದರೂ ಸಹ ತಮಿಳುನಾಡು ಇದನ್ನು ಕೇಳಿಸಿಕೊಳ್ಳುವ ತಾಳ್ಮೆ ತೋರುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಸದ್ಯ ಮೇಕೆದಾಟು ಯೋಜನೆಯ ಸಂಬಂಧ ರಾಜ್ಯ ಸರ್ಕಾರ ಕಾನೂನು ಹೋರಾಟ ನಡೆಸುತ್ತಿದ್ದು ಈ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್​ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ . ಮೇಕೆದಾಟು ಯೋಜನೆ ಅನುಷ್ಠಾನದ ವಿಚಾರದಲ್ಲಿ ಡಿ.ಕೆ ಶಿವಕುಮಾರ್​ ಅವರ ದೆಹಲಿ ಭೇಟಿ ಕೂಡ ಮಹತ್ವದ್ದು ಎನಿಸಿದೆ.

Also Read: MLA HY Meti passes away : ಮಾಜಿ ಸಚಿವ, ಹಾಲಿ ಶಾಸಕ ಹೆಚ್.ವೈ. ಮೇಟಿ ನಿಧನ

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories