ಸಿಎಂ ಆತುರದಲ್ಲಿ ನಾನಿಲ್ಲ, ಭಗವಂತ ಯಾವಾಗ ಕೊಡ್ತಾನೋ ಕೊಡಲಿ : ಮಾಧ್ಯಮಗಳ ಮೇಲೆ ಗರಂ ಆಗಿದ್ಯಾಕೆ ಡಿಕೆಶಿ

ಬೆಂಗಳೂರು: DK Shivakumar: ನವೆಂಬರ್ ಕ್ರಾಂತಿಯ ನಡುವಲ್ಲೇ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಮಾಧ್ಯಮಗಳ ಮೇಲೆ ಗರಂ ಆಗಿದ್ದಾರೆ. ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಲಿದ್ದೇನೆ ಎಂದು ಕೆಲ ಮಾಧ್ಯಮಗಳು ಸುದ್ದಿಯನ್ನು ತಿರುಚಿ ವಿವಾದ ಸೃಷ್ಟಿಸಿವೆ ಎಂದಿದ್ದಾರೆ.
ಬೆಂಗಳೂರಿನ ಲಾಲ್ಬಾಗ್ನ ಉದ್ಯಾನವನದಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ, ಮಾಧ್ಯಮದವರ ಜೊತೆಗೆ ಅವರು ಮಾತನಾಡಿದ್ರು. ಆರಂಭದಲ್ಲೇ ಮಾಧ್ಯಮದವರ ಮೇಲೆ ಗರಂ ಆದ ಡಿಕೆ ಶಿವಕುಮಾರ್ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.
ಸಾರ್ವಜನಿಕರು ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕ, ಆ ಸಮಯ ಹತ್ತಿರ ಬರುತ್ತಿದೆಯೇ ಎಂದು ಕೇಳಿದರು. ಆದರೆ ಸಿಎಂ ಆಗುವ ಕಾಲ ಹತ್ತಿರ ಬರುತ್ತಿದೆ ಎಂದು ನಾನೇ ಹೇಳಿದ್ದೇನೆ ಎಂದು ಕೆಲವು ಮಾಧ್ಯಮಗಳು ಸುದ್ದಿ ತಿದ್ದಿ ಪ್ರಸಾರ ಮಾಡುತ್ತಿವೆ. ನೀವು ಸುದ್ದಿಯನ್ನು ತಿರುಚಿ ತೋರಿಸ ಬೇಡಿ ಅನ್ನುವ ಮೂಲಕ ಗರಂ ಆಗಿದ್ದಾರೆ..
Also Read: ಕರ್ನಾಟಕದಲ್ಲಿ 24 ಗಂಟೆಯಲ್ಲಿ ಬಾರೀ ಮಳೆ : 16 ಜಿಲ್ಲೆಗಳಲ್ಲಿ ಐಎಂಡಿ ಎಚ್ಚರಿಕೆ
ನಾನು ಸಿಎಂ ಹುದ್ದೆಯನ್ನು ಅಲಂಕರಿಸುವ ಆತುರದಲ್ಲಿ ಇಲ್ಲ. ನಾನು ಇಲ್ಲಿಗೆ ಬಂದಿರುವುದು ಸಾರ್ವಜನಿಕರ ಸೇವೆ ಮಾಡುವುದಕ್ಕೆ, ರಾಜಕಾರಣ ಮಾಡಲು ಅಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗಾಡುತ್ತಿದ್ದೇನೆ. ನೀವು ಇದೇ ರೀತಿ ಸುದ್ದಿ ತಿರುಚುವುದಾದ್ರೆ ನಾನು ನಿಮಗೆ ಸಹಕಾರ ನೀಡುವುದಿಲ್ಲ. ನಾನು ಯಾವುದೇ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗುವುದಿಲ್ಲ ಎಂದಿದ್ದಾರೆ.
“ನಾನು ಆ ಹೇಳಿಕೆ ಎಲ್ಲಿ ಹೇಳಿದ್ದೇನೆ. ಮಾಧ್ಯಮಗಳು ರಾಜಕಾರಣ ಮಾಡುವುದು ಬೇಡ. ನಾನು ಆ ರೀತಿ ಹೇಳಿಲ್ಲ, ಅದರ ಅಗತ್ಯವೂ ನನಗೆ ಇಲ್ಲ. ನನಗೆ ನನ್ನ ಗುರಿ ಗೊತ್ತಿದೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೋ ಕೊಡಲಿ. ರಾಜ್ಯದ ಜನರ ಸೇವೆ ಹಾಗೂ ಬೆಂಗಳೂರಿನ ನಾಗರೀಕರಿಗೆ ಉತ್ತಮ ಆಡಳಿತ ನೀಡಲು ಶ್ರಮಿಸುತ್ತಿದ್ದೇನ ಎಂದಿದ್ದಾರೆ.
Also Read: ವೀರೇಂದ್ರ ಪಪ್ಪಿಗೆ ಮತ್ತೆ ಶಾಕ್ : 40 ಕೆಜಿ ಚಿನ್ನ ಇಡಿ ವಶಕ್ಕೆ
ಆದರೆ ಒಳ್ಳೆಯ ಕೆಲಸ ಬಿಟ್ಟು ವಿವಾದ ಸೃಷ್ಟಿಸಲು ಕೆಲವು ಮಾಧ್ಯಮಗಳು ಪ್ರಯತ್ನಿಸುತ್ತಿವೆ” ಎಂದು ಆರೋಪಿಸಿದ ಅವರು, “ಇದೇ ರೀತಿ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಾಕಿ, ದಾರಿ ತಪ್ಪಿಸುವ ಪ್ರಯತ್ನ ಮಾಡಿದರೆ ನಾನು ಮಾನನಷ್ಟ ಮೊಕದ್ದಮೆ ಹಾಕಬೇಕಾಗುತ್ತದೆ” ಎಂದು ತಿಳಿಸಿದ್ದಾರೆ.



