ಅಯೋಧ್ಯೆ ರಾಮಮಂದಿರ ಹುಂಡಿ ಕಳ್ಳತನದ ಎಫೆಕ್ಟ್: ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ಸಿಸಿಕ್ಯಾಮರಾ ಕಡ್ಡಾಯ!

ರಾಮಮಂದಿರದಲ್ಲಿ ನಡೆದ ಹುಂಡಿ ಕಳ್ಳತನ ಪ್ರಕರಣವು ದೇಶಾದ್ಯಂತ ಸಂಚಲನ ಸೃಷ್ಠಿಸಿದೆ. ಈ ಗಂಭೀರ ಪ್ರಕರಣದ ಎಫೆಕ್ಟ್​ ಕರ್ನಾಟಕಕ್ಕೂ ತಟ್ಟಿದ್ದು, ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ರಾಜ್ಯ ಸರ್ಕಾರ ಹೈ ಅಲರ್ಟ್ ಆಗಿದೆ.

ಅಯೋಧ್ಯೆ ರಾಮಮಂದಿರದಲ್ಲಿ ನಡೆದ ಹುಂಡಿ ಕಳ್ಳತನ ಪ್ರಕರಣವು ದೇಶಾದ್ಯಂತ ಸಂಚಲನ ಸೃಷ್ಠಿಸಿದೆ. ಈ ಗಂಭೀರ ಪ್ರಕರಣದ ಎಫೆಕ್ಟ್​ ಕರ್ನಾಟಕಕ್ಕೂ ತಟ್ಟಿದ್ದು, ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ರಾಜ್ಯ ಸರ್ಕಾರ ಹೈ ಅಲರ್ಟ್ ಆಗಿದೆ. ಈ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಸಿ.ಸಿ ಕ್ಯಾಮರಾ ಅಳವಡಿಕೆ ಕಡ್ಡಾಯಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಸಭೆಯ ಬಳಿಕ ಈ ವಿಚಾರವಾಗಿ ಖುದ್ದು ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್​, ಭಕ್ತರ ನಂಬಿಕೆ, ದೇವಾಲಯಗಳಲ್ಲಿ ಆಡಳಿತದ ಪಾರದರ್ಶಕತೆ ಕಾಯ್ದುಕೊಳ್ಳುವ ಅನಿವಾರ್ಯತೆ ಎದುರಾಗಿದ್ದು, ರಾಜ್ಯದ ಎಲ್ಲಾ ದೇಗುಲಗಳಲ್ಲಿ ಸಿ.ಸಿ ಕ್ಯಾಮರಾ ಅಳವಡಿಗೆ ಕಡ್ಡಾಯಗೊಳಿಸುವ ಬಗ್ಗೆ ಗಂಭೀರವಾಗಿ ಯೋಚಿಸುತ್ತಿದ್ದೇವೆ ಎಂದಿದ್ದಾರೆ.

ಅಯೋಧ್ಯೆ ರಾಮಮಂದಿರದಲ್ಲಿ ನಡೆದ ಹುಂಡಿ ಕಳ್ಳತನ ಪ್ರಕರಣದ ವಿಚಾರವಾಗಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್​, ಧರ್ಮದ ಹೆಸರಲ್ಲಿ ನಡೆಯುವ ಇಂತಹ ಪ್ರಕರಣಗಳು ನಿಜಕ್ಕೂ ಭಕ್ತರಿಗೆ ಅಗೌರವ ಉಂಟು ಮಾಡುವಂತದ್ದು. ದೇವಸ್ಥಾನಗಳಲ್ಲಿ ನಡೆಯುವ ಹುಂಡಿ ಎಣಿಕೆ ಕಾರ್ಯ, ದೇಣಿಗೆ ಸಂಗ್ರಹ ಸೇರಿದಂತೆ ಎಲ್ಲಾ ಹಣಕಾಸು ವ್ಯವಹಾರಗಳು ಪಾರದರ್ಶಕವಾಗಿ ಇರಬೇಕು. ಹೀಗಾಗಿ ರಾಜ್ಯ ಎಲ್ಲಾ ಮುಜರಾಯಿ ಇಲಾಖೆ ದೇಗುಲಗಳಲ್ಲಿ ಕಡ್ಡಾಯವಾಗಿ ಸಿ.ಸಿ ಕ್ಯಾಮರಾ ಅಳವಡಿಸುವ ಅನಿವಾರ್ಯತೆ ಎದುರಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ನೀಡುವಿಕೆಯಲ್ಲಿ ತಾಂತ್ರಿಕ ತೊಂದರೆಗಳು ಎದುರಾಗುತ್ತಿದ್ದವು. ಒಬ್ಬರ ಮೊಬೈಲ್​ಗೆ 10 ಜನರ ಹಣ ಕೂಡ ಜಮೆಯಾಗುತ್ತಿತ್ತು. ಅನೇಕ ಕಡೆಗಳಲ್ಲಿ ಅನರ್ಹರಿಗೆ ಯೋಜನೆಯ ಮೊತ್ತ ದೊರೆಯುತ್ತಿತ್ತು. ಇದೆಲ್ಲದರ ವರದಿ ಆಧರಿಸಿ, ಗ್ಯಾರಂಟಿ ಯೋಜನೆಯ ದಾಖಲೆ ಪರಿಶೀಲನೆ ನಡೆಸುತ್ತಿದ್ದೇವೆ. ಅರ್ಹರಿಗೆ ಮಾತ್ರ ಗ್ಯಾರಂಟಿ ಯೋಜನೆ ದೊರಕಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.