Devegowda Wife Chennamma : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

ಹಾಸನ ಜಿಲ್ಲೆಯ ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚೆನ್ನಮ್ಮ ಅವರು 1954ರ ಮೇ 25ರಂದು ಎಚ್.ಡಿ.ದೇವೇಗೌಡರನ್ನು ವಿವಾಹವಾಗಿದ್ದರು

Devegowda Wife Chennamma :ಬೆಂಗಳೂರು : ಮಾಜಿ ಪ್ರಧಾನಿ ಎಚ್‌.ಡಿ,.ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರು ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಜುಲೈ 15 ರಂದು ಅವರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಚೆನ್ನಮ್ಮ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಹಾಸನ ಜಿಲ್ಲೆಯ ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚೆನ್ನಮ್ಮ ಅವರು 1954ರ ಮೇ 25ರಂದು ಎಚ್.ಡಿ.ದೇವೇಗೌಡರನ್ನು ವಿವಾಹವಾಗಿದ್ದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣ, ಎಚ್.ಡಿ.ಬಾಲಕೃಷ್ಣ, ಎಚ್.ಡಿ.ರಮೇಶ್‌ ಅಲ್ಲದೇ ಶೈಲಜಾ ಮತ್ತು ಅನುಸೂಯಾ ಎಂಬ ಮಕ್ಕಳಿದ್ದಾರೆ.

ದೇವೇಗೌಡರ ಪತ್ನಿಯಾಗಿರುವ ಚೆನ್ನಮ್ಮ ಅವರು 2001ರ ಫೆಬ್ರವರಿ ತಿಂಗಳಿನಲ್ಲಿ ಹರದನಹಳ್ಳಿಯಲ್ಲಿ ದೇವಾಲಯದ ಪೂಜೆ ಮುಗಿಸಿ ವಾಪಾಸ್‌ ಬರುತ್ತಿದ್ದ ವೇಳೆಯಲ್ಲಿ ಅವರ ಮೇಲೆ ಆಸಿಡ್‌ ದಾಳಿ ನಡೆದಿತ್ತು. ಮಾಜಿ ಪ್ರಧಾನಿ ಅವರ ಪತ್ನಿಯಾಗಿ ಚೆನ್ನಮ್ಮ ಅವರು ತನ್ನ ಇಡೀ ಕುಟುಂಬವನ್ನು ಸಮರ್ಥವಾಗಿ ಮುನ್ನೆಡೆಸಿದ್ದರು.

former prime Minister HD Deve Gowdas wife Chennamma Passed Away

Exit mobile version