ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮುನ್ನ ಈ ವಿಚಾರ ನೆನಪಿನಲ್ಲಿಡಿ

ಬೀದರ್ : ಗಣೇಶ ಚತುರ್ಥಿ (Ganesh Chaturthi) ಹಬ್ಬ ಸಮೀಪಿಸುತ್ತಿದೆ. ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕಾತರರಾಗಿದ್ದಾರೆ. ಆದರೆ ಮೂರ್ತಿ ಪ್ರತಿಷ್ಠಾಪನೆಗೆ ಮುನ್ನ ಸರಕಾರ ಆದೇಶ ಪಾಲಿಸುವುದು ಕಡ್ಡಾಯ.
ಗೌರಿ ಗಣೇಶ ಹಬ್ಬಕ್ಕಾಗಿಯೇ ರಾಜ್ಯ ಸರಕಾರ ವಿಶೇಷ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮಾರ್ಗಸೂಚನೆ ಪಾಲನೆ ಮಾಡದಿದ್ರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆಗೆ ಪ್ರತ್ಯೇಕ ರೂಲ್ಸ್ ಜಾರಿ ಮಾಡಲಾಗಿದೆ.
ಕರ್ನಾಟಕ ಸರಕಾರ ಗಣೇಶ ಚತುರ್ಥಿಗೆ ಹೊಸ ರೂಲ್ಸ್ ಜಾರಿ ಮಾಡಿ ಬೆನ್ನಲ್ಲೇ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ ಈಶ್ವರ್ ಬಿ. ಖಂಡ್ರೆ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವಂತೆ ಕರೆ ಕೊಟ್ಟಿದ್ದಾರೆ.
ಭಾದ್ರಪದ ಶುಕ್ಲ ಚತುರ್ಥಿಯಂದು ಪೂಜೆಗೊಳ್ಳುವ ಗಣೇಶನು ಮಣ್ಣಿನಿಂದಲೇ ಹುಟ್ಟಿದ ದೇವರಾಗಿದ್ದು, ಕೇವಲ ಮಣ್ಣಿನಿಂದ ತಯಾರಿಸಿದ ಮತ್ತು ಬಣ್ಣರಹಿತ ಮೂರ್ತಿಗಳನ್ನೇ ಪೂಜಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಮತ್ತು ವಿಷಕಾರಿಯಾದ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳು ಜಲ ಮಾಲಿನ್ಯಕ್ಕೆ ಮತ್ತು ಜಲಚರಗಳ ಸಾವಿಗೆ ಕಾರಣವಾಗುತ್ತಿವೆ ಎಂದಿದ್ದಾರೆ.
ಇದನ್ನೂ ಓದಿ : ಗಣೇಶ ಚತುರ್ಥಿ : ಡಿಜೆ ನಿಷೇಧ, ಮಣ್ಣಿನ ಗಣಪನಿಗಷ್ಟೇ ಅವಕಾಶ, ಕರ್ನಾಟಕದಲ್ಲಿ ಹೊಸ ಮಾರ್ಗಸೂಚಿ
ಕರ್ನಾಟಕ ಸರಕಾರದ ಆದೇಶ ಮತ್ತು ಹೈಕೋರ್ಟ್ ನಿರ್ದೇಶನ:
ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯಿದೆ 1974ರ ಅಡಿಯಲ್ಲಿ ರಾಜ್ಯದ ಯಾವುದೇ ಜಲಮೂಲದಲ್ಲಿ ಪಿಒಪಿ ಮೂರ್ತಿಗಳ ವಿಸರ್ಜನೆಯನ್ನು ನಿಷೇಧಿಸಲಾಗಿದೆ.
2023ರ ಸೆಪ್ಟೆಂಬರ್ 15ರಂದು ಸರ್ಕಾರವು ಪಿಒಪಿ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ.
ಇತ್ತೀಚೆಗೆ ಹೈಕೋರ್ಟ್ ಸಹ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ನಿರ್ದೇಶನ ನೀಡಿದೆ ಎಂದು ಸಚಿವರು ಮಾಹಿತಿ ನೀಡಿದರು.
ಇದನ್ನೂ ಓದಿ : ಗಣೇಶ ಚತುರ್ಥಿ : ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ
ಪಿಒಪಿ ಗಣೇಶ ಮೂರ್ತಿಗೆ ನಿಷೇಧ
ಪಿಒಪಿ ಮೂರ್ತಿಗಳಲ್ಲಿ ಗಂಧಕ, ರಂಜಕ, ಜಿಪ್ಸಮ್ ಮತ್ತು ಅಪಾಯಕಾರಿ ಭಾರ ಲೋಹಗಳು ಇರುತ್ತವೆ. ಇವು ನೀರಿನಲ್ಲಿ ಕರಗಿದಾಗ ಮಾನವ ಮತ್ತು ಪ್ರಾಣಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ.
ಪರಿಸರಕ್ಕೆ ಮಾರಕವಾಗಿರುವ ಇಂತಹ ಮೂರ್ತಿಗಳನ್ನು ತ್ಯಜಿಸಿ, ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನು ಪೂಜಿಸಿ ಪರಿಸರವನ್ನು ಉಳಿಸಬೇಕು ಎಂದು ಸಚಿವ ಈಶ್ವರ ಖಂಡ್ರೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಹಬ್ಬದ ಸಂಭ್ರಮದಲ್ಲಿ ಯಾರಿಗೂ ನೋವುಂಟು ಮಾಡುವ ಉದ್ದೇಶ ಸರ್ಕಾರಕ್ಕಿಲ್ಲವಾದರೂ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
Ganesh Chaturthi 2025 Keep this in mind before installing a Ganesh idol



