Good news for job seekers: ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್ : ಪ್ರಸಕ್ತ ಸಾಲಿನಲ್ಲಿ 8 ಸಾವಿರ ಸರ್ಕಾರಿ ಶಿಕ್ಷಕರ ನೇಮಕಕ್ಕೆ ಆದೇಶ
Good news for job seekers: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶತಾಯಗತಾಯ ದಾಖಲಾತಿ ಹೆಚ್ಚಳ ಮಾಡಲು ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರ ಈಗಾಗಲೇ ನಾನಾ ಕ್ರಮಗಳನ್ನು ಕೈಗೊಂಡಿದೆ. ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ಕರ್ನಾಟಕ ಪಬ್ಲಿಕ್ ಸ್ಕೂಲ್ಗಳ ನಿರ್ಮಾಣ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ, ನೋಟ್ಬುಕ್, ಪುಸ್ತಕ, ಸಮವಸ್ತ್ರಗಳ ಉಚಿತ ವಿತರಣೆ, ಶಾಲಾ ಬಸ್ ಸೌಕರ್ಯ ಸೇರಿದಂತೆ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಶಿಕ್ಷಕರ ನೇಮಕಾತಿಗೂ ಮುಂದಾಗಿದೆ.
ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ(Madhu Bangarappa), ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ 7 ರಿಂದ 8 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಸಂಗೀತ ಹಾಗೂ ದೈಹಿಕ ಶಿಕ್ಷಕ ವಿಭಾಗದ ಶಿಕ್ಷಕರ ನೇಮಕಾತಿಯೂ ನಡೆಯಲಿದೆ ಎಂದಿದ್ದಾರೆ.
Also Read: ಬಿಜೆಪಿ ಮುಖಂಡನಿಗೆ ಸಚಿವ ಸ್ಥಾನ ನೀಡಿದ ಸಿಎಂ ಸಿದ್ದರಾಮಯ್ಯ ಸರ್ಕಾರ !
ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದು ನಮ್ಮ ಉದ್ದೇಶವಾಗಿದೆ. ಇದು ಮಾತ್ರವಲ್ಲ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬರುವುದು ಕೂಡ ಮುಖ್ಯ. ಈಗಾಗಲೇ ಕೆಪಿಎಸ್ ಶಾಲೆಗಳಿಗೆ ಉತ್ತಮ ಸ್ಪಂದನೆ ದೊರಕಿದ್ದು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುವುದಾಗಿ ಮಾಹಿತಿ ನೀಡಿದ್ದಾರೆ.



