ವಾಹನ ಸವಾರರಿಗೆ ಮತ್ತೊಮ್ಮೆ ಗುಡ್ನ್ಯೂಸ್ : ರಾಜ್ಯದಲ್ಲಿ ಟ್ರಾಫಿಕ್ ಫೈನ್ ಪಾವತಿಗೆ ಮತ್ತೆ ಶೇ 50 ವಿನಾಯಿತಿ
ರಾಜ್ಯದ ಬೊಕ್ಕಸ ತುಂಬಿಸಿಕೊಳ್ಳುವ ಪ್ರಮುಖ ಅಸ್ತ್ರವಾಗಿರುವ ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಯನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಮತ್ತೊಮ್ಮೆ ಆಫರ್ ನೀಡಿದೆ.
ರಾಜ್ಯದ ಬೊಕ್ಕಸ ತುಂಬಿಸಿಕೊಳ್ಳುವ ಪ್ರಮುಖ ಅಸ್ತ್ರವಾಗಿರುವ ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಯನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಮತ್ತೊಮ್ಮೆ ಆಫರ್ ನೀಡಿದೆ. ಜೂನ್ 21ರಿಂದ ಜುಲೈ 10ರವರೆಗೆ ಟ್ರಾಫಿಕ್ ಫೈನ್ ಪಾವತಿಗೆ 50 ಪರ್ಸೆಂಟ್ ವಿನಾಯಿತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. 20 ದಿನಗಳ ಕಾಲಾವಕಾಶದಲ್ಲಿ ಹೆಚ್ಚೆಚ್ಚು ಟ್ರಾಫಿಕ್ ದಂಡವನ್ನು ವಸೂಲಿ ಮಾಡುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ.
ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ಗಳಲ್ಲಿ 2026ರ ಮೇ ತಿಂಗಳಿಗಿಂತ ಮೊದಲು ದಾಖಲಾಗಿರುವ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991ರಿಂದ 2022ರವರೆಗಿನ ಸುದೀರ್ಘ ಅವಧಿಯಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಅರ್ಧದಷ್ಟು ವಿನಾಯಿತಿ ನೀಡಲಾಗಿದೆ. ಈ ಅವಧಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದವರು ಜೂನ್ 21ರ ಬಳಿಕ ಕೇವಲ ಅರ್ಧ ಮೊತ್ತವನ್ನು ಪಾವತಿ ಮಾಡಿದರೆ ಸಾಕಾಗಲಿದೆ.
Also Read: ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ, ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿ!
ಸಾರ್ವಜನಿಕರು ಅಸ್ತ್ರಂ ಆ್ಯಪ್, ಕೆಎಸ್ಪಿಎಸ್ ಆ್ಯಪ್ ಹಾಗೂ ರಾಜ್ಯಾದ್ಯಂತ ಇರುವ ಕರ್ನಾಟಕ ಒನ್ ಕೇಂದ್ರಗಳಂತಹ ಡಿಜಿಟಲ್ ವೇದಿಕೆಗಳ ಮೂಲಕ ದಂಡ ಪಾವತಿ ಮಾಡುವ ಮೂಲಕ ಈ ವಿನಾಯಿತಿಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಕಳೆದ ವರ್ಷ ಕೂಡ ರಾಜ್ಯ ಸರ್ಕಾರ ಇದೇ ಮಾದರಿಯ ವಿನಾಯಿತಿಯನ್ನು ನೀಡಿತ್ತು. ಆ ಸಂದರ್ಭದಲ್ಲಿ ರಾಜ್ಯ ಸರ್ಕಾರಕ್ಕೆ ಕೋಟಿಗಟ್ಟಲೇ ಆದಾಯ ಹರಿದುಬಂದಿತ್ತು. ಇದೀಗ ಮತ್ತೊಮ್ಮೆ ಪೊಲೀಸ್ ಮತ್ತು ಸಾರಿಗೆ ಇಲಾಖೆ ಜಂಟಿಯಾಗಿ ಸಾರ್ವಜನಿಕರಿಗೆ ಈ ಬಿಗ್ ಆಫರ್ ನೀಡಿವೆ.
Good news for motorists again 50 percent exemption on traffic fines in the state again



