ನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್.. ಸಾರಿಗೆ ಇಲಾಖೆಯಿಂದ ಉಚಿತ ಪ್ರಯಾಣದ ಬಂಪರ್ ಆಫರ್!

ನೀಟ್ ಪರೀಕ್ಷೆ ಮತ್ತೊಮ್ಮೆ ಎದುರಿಸಲು ಸಜ್ಜಾಗಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಶುಭ ಸುದ್ದಿಯನ್ನು ನೀಡಿದೆ.

ನೀಟ್ ಪರೀಕ್ಷೆ ಮತ್ತೊಮ್ಮೆ ಎದುರಿಸಲು ಸಜ್ಜಾಗಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಶುಭ ಸುದ್ದಿಯನ್ನು ನೀಡಿದೆ. ಜೂನ್ 21ರಂದು ನಡೆಯಲಿರುವ ನೀಟ್ ಯುಜಿ ಮರು ಪರೀಕ್ಷೆಗೆ ಹಾಜರಾಗಲಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ. ಪ್ರವೇಶ ಪ್ರತಿ ತೋರಿಸುವ ಅಭ್ಯರ್ಥಿಗಳಿಗೆ ಸರ್ಕಾರಿ ಬಸ್ಗಳಲ್ಲಿ ಪರೀಕ್ಷಾ ಕೇಂದ್ರದವರೆಗೂ ಉಚಿತ ಬಸ್ ಪ್ರಯಾಣ ಸೌಲಭ್ಯ ದೊರೆಯಲಿದೆ.

ಸಿಇಟಿ ಸಂದರ್ಭದಲ್ಲಿಯೂ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿತ್ತು, ಇದೀಗ ನೀಟ್ ಯುಜಿ ಪರೀಕ್ಷೆಯ ಸಂದರ್ಭದಲ್ಲಿಯೂ ಸಾರಿಗೆ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಈ ಕ್ರಮ ಕೈಗೊಂಡಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಇದನ್ನೂ ಓದಿ : ಸಾರ್ವಜನಿಕ ಸ್ಥಳದಲ್ಲಿ ಮೊಬೈಲ್ ಚಾರ್ಜ್ ಮಾಡುವವರೇ ಎಚ್ಚರ – ಕ್ಷಣಮಾತ್ರದಲ್ಲಿ ನಿಮ್ಮ ಖಾತೆಯ ಹಣ ಮಂಗಮಾಯ

ಒಟ್ಟಾರೆಯಾಗಿ, ನೀಟ್ ಮರು ಪರೀಕ್ಷೆಯ ಗೊಂದಲ ಮತ್ತು ಒತ್ತಡದಲ್ಲಿದ್ದ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯ ಈ ಪ್ರಕಟಣೆ ನಿರಾಳತೆ ತಂದಿದೆ. ಪರೀಕ್ಷಾರ್ಥಿಗಳು ಯಾವುದೇ ಸಾರಿಗೆ ವೆಚ್ಚದ ಚಿಂತೆಯಿಲ್ಲದೆ, ಸಾಗಣೆ ಸಮಸ್ಯೆಯಿಲ್ಲದೆ ನಿಶ್ಚಿಂತೆಯಿಂದ ಪರೀಕ್ಷಾ ಕೇಂದ್ರ ತಲುಪಲು ಈ ಉಚಿತ ಬಸ್ ಪ್ರಯಾಣ ಯೋಜನೆ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಈ ಸೌಲಭ್ಯದ ಸದುಪಯೋಗ ಪಡಿಸಿಕೊಂಡು ಯಶಸ್ವಿಯಾಗಿ ಪರೀಕ್ಷೆ ಎದುರಿಸುವಂತೆ ಸಾರಿಗೆ ಇಲಾಖೆ ಸಚಿವರು ತಿಳಿಸಿದ್ದಾರೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories