ಎಸ್ಎಸ್ಎಲ್ಸಿ , ಪಿಯುಸಿ ವಿದ್ಯಾರ್ಥಿಗಳಿಗೆ ಶುಭಸುದ್ದಿ : ಪಾಸಿಂಗ್ ಮಾರ್ಕ್ಸ್ ಕಡಿತ
Good news for Students: 2025-26ನೇ ಸಾಲಿನ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಶುಭ ಸುದ್ದಿ ದೊರಕಿದೆ. ಎರಡೂ ಪರೀಕ್ಷೆಗಳ ಪಾಸಿಂಗ್ ಮಾರ್ಕ್ಸ್ನಲ್ಲಿ ಕಡಿತ ಮಾಡಲಾಗಿದ್ದು ಇನ್ಮುಂದೆ ದ್ವಿತೀಯ ಪಿಯುಸಿಯಲ್ಲಿ 600ಕ್ಕೆ 198 ಅಂಕ ಮತ್ತು SSLCಯಲ್ಲಿ 625ಕ್ಕೆ ಕನಿಷ್ಠ 206 ಅಂಕ ಗಳಿಸಿದ ವಿದ್ಯಾರ್ಥಿಗಳು ತೇರ್ಗಡೆ ಹೊಂದಲಿದ್ದಾರೆ.
ಬೆಂಗಳೂರಿನಲ್ಲಿ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ವಿಚಾರವಾಗಿ ಮಾತನಾಡಿದ್ದು ಲಿಖಿತ ಹಾಗೂ ಆಂತರಿಕ ಅಂಕ ಸೇರಿ ಪಿಯುಸಿಯಲ್ಲಿ ಪ್ರತಿ ವಿಷಯದಲ್ಲೂ ಕನಿಷ್ಠ 30 ಅಂಕ ಕಡ್ಡಾಯವಾಗಿ ವಿದ್ಯಾರ್ಥಿಗಳು ಗಳಿಸಬೇಕು. SSLC ಪರೀಕ್ಷೆಯಲ್ಲಿ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 30 ಅಂಕ ಪಡೆದರೆ ವಿದ್ಯಾರ್ಥಿಗಳು ತೇರ್ಗಡ ಆಗಲಿದ್ದಾರೆ ಎಂದು ತಿಳಿಸಿದ್ದಾರೆ.
Also read: ದೊಡ್ಡಬಳ್ಳಾಪುರ : ಬಿಪಿಎಲ್ ಕಾರ್ಡ್ ರದ್ದತಿ, ಕರವೇ ಪ್ರತಿಭಟನೆ
ವಿದ್ಯಾರ್ಥಿಗಳಿಗೆ ಪಾಸಿಂಗ್ ಮಾರ್ಕ್ಸ್ ಕಡಿತಗೊಳಿಸಬೇಕೇ ಅಥವಾ ಬೇಡವೇ ಎಂಬ ವಿಚಾರವಾಗಿ ಸಾರ್ವಜನಿಕರಿಂದಲೇ ಮಾಹಿತಿ ಸಂಗ್ರಹಣೆ ಮಾಡಲಾಗಿತ್ತು. ಇದರಲ್ಲಿ ಪಾಸಿಂಗ್ ಮಾರ್ಕ್ಸ್ ಕಡಿತ ಮಾಡುವ ಕಡೆಯೇ ಸಾರ್ವಜನಿಕರು ಹೆಚ್ಚು ಒಲವು ತೋರಿದ್ದರು. ಈ ಹಿನ್ನೆಲೆಯಲ್ಲಿ ಇನ್ಮುಂದೆ SSLCಯಲ್ಲಿ ಪ್ರಥಮ ಭಾಷೆ ಹೊರತುಪಡಿಸಿ ಶೇ. 33 ಫಲಿತಾಂಶ ಬಂದರೆ ವಿದ್ಯಾರ್ಥಿಗಳು ತೇರ್ಗಡೆ ಆಗಲಿದ್ದಾರೆ.
ಇದರ ಜೊತೆಯಲ್ಲಿ ಪ್ರಥಮ ಭಾಷೆ ಗರಿಷ್ಠ ಅಂಕವನ್ನು 125ರಿಂದ 100ಕ್ಕೆ ಇಳಿಸುವ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ. ಪಾಸಿಂಗ್ ಮಾರ್ಕ್ಸ್ ಕಡಿತ ವಿಚಾರದಲ್ಲಿ ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಿದಂತೆಯೇ ಈ ವಿಚಾರವಾಗಿಯೂ ಸಾರ್ವಜನಿಕರ ನಿಲುವು ಕೇಳಲಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Also Read: ಶಾಸಕರಿಗೆ 10 ಕೋಟಿ ಅನುದಾನ,ಭರವಸೆ ಈಡೇರಿಸದ ಸರ್ಕಾರ
ನೆರೆ ರಾಜ್ಯಗಳಲ್ಲಿ ಈಗಾಗಲೇ ಈ ಮಾನದಂಡಗಳು ಜಾರಿಗೆ ಬಂದಿದ್ದು ಈ ವರ್ಷದಿಂದ ನಮ್ಮ ರಾಜ್ಯದ ಎಲ್ಲಾ ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾಥಿಗಳಿಗೆ ಹೊಸ ನಿಯಮ ಜಾರಿಗೆ ಬರಲಿದೆ. ಇದರಿಂದ ವಿದ್ಯಾರ್ಥಿಗಳಿಗೆ ತೇರ್ಗಡೆ ಒತ್ತಡ ಕೂಡ ಕಡಿಮೆಯಾಗಲಿದೆ.



