ಶಿಕ್ಷಕ ವೃಂದಕ್ಕೆ ಗುಡ್ ನ್ಯೂಸ್: ಬಡ್ತಿ ಕಾಯುತ್ತಿದ್ದವರಿಗೆ ಸಿಗಲಿದೆ ಮುಕ್ತಿ; ವಿಕಲಚೇತನ ಶಿಕ್ಷಕರಿಗೆ ಸಿಗಲಿದೆ ಆದ್ಯತೆ!

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಹಶಿಕ್ಷಕರಿಗೆ ರಾಜ್ಯ ಸರ್ಕಾರ ಗುಡ್​ನ್ಯೂಸ್​ ನೀಡಿದೆ.

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಹಶಿಕ್ಷಕರಿಗೆ ರಾಜ್ಯ ಸರ್ಕಾರ ಗುಡ್​ನ್ಯೂಸ್​ ನೀಡಿದೆ. ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ಪಡೆಯುವ ಕನಸು ಕಾಣುತ್ತಿದ್ದ ಸಹ ಶಿಕ್ಷಕರಿಗೆ ಬಡ್ತಿ ಭಾಗ್ಯ ನೀಡುವ ಪ್ರಕ್ರಿಯೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಾಲನೆ ನೀಡಿದೆ. ಇದರಿಂದ ದೀರ್ಘಕಾಲದಿಂದ ಬಡ್ತಿಗೆ ಕಾಯುತ್ತಿದ್ದ ಸಹಶಿಕ್ಷಕರಿಗೆ ಬಿಗ್​ ರಿಲೀಫ್​ ದೊರಕಿದಂತಾಗಿದೆ.

ಈ ವರ್ಷದ ಜನವರಿ 1ರಂದು ತಯಾರಿಸಲಾಗಿರುವ ತಾತ್ಕಾಲಿಕ ಜ್ಯೇಷ್ಠತಾ ಪಟ್ಟಿಯನ್ನು ಆಧರಿಸಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹಶಿಕ್ಷಕರಿಗೆ ಬಡ್ತಿ ನೀಡುವುದಾಗಿ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಮುಖ್ಯ ಶಿಕ್ಷಕರಾಗಿ ಬಡ್ತಿ ಹೊಂದಲು ಇಚ್ಛಿಸುವ ಸಹ ಶಿಕ್ಷಕರು ಕನಿಷ್ಟ 12 ವರ್ಷಗಳ ಕಾಲ ಸೇವೆ ಸಲ್ಲಿಸುವುದು ಕಡ್ಡಾಯವಾಗಿದೆ.

ಇದನ್ನೂ ಓದಿ : ಕೆನರಾ ಬ್ಯಾಂಕ್ ಕಟ್ಟಡ ಕುಸಿತ: ಅವಶೇಷಗಳಡಿ ಸಿಲುಕಿದ ಕೋಟ್ಯಂತರ ರೂಪಾಯಿ ನಗದು, ಚಿನ್ನ!

ಇನ್ನು ವಿಕಲಚೇತನ ಅಭ್ಯರ್ಥಿಗಳಿಗೆ ಬಡ್ತಿ ಪ್ರಕ್ರಿಯೆಯಲ್ಲಿ ವಿಶೇಷ ವಿನಾಯಿತಿ ಕಲ್ಪಿಸಲಾಗಿದೆ. ಅಂಗವಿಕಲ ಶಿಕ್ಷಕರಿಗೆ 4 ಪರ್ಸೆಂಟ್​ ಮೀಸಲಾತಿ ಕಲ್ಪಿಸಲಾಗಿದ್ದು, ಸಂಬಂಧಪಟ್ಟ ಅಭ್ಯರ್ಥಿಗಳು ಜಿಲ್ಲಾ ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರ ಅಥವಾ ಯುಡಿಐಡಿ ಕಾರ್ಡ್ ಸಲ್ಲಿಸುವುದು ಕಡ್ಡಾಯವಾಗಿದೆ. ಕೌನ್ಸೆಲಿಂಗ್​ ಸಂದರ್ಭದಲ್ಲಿ ಇಂತಹ ಅಭ್ಯರ್ಥಿಗಳಿಗೆ ವಿಶೇಷ ವಿನಾಯಿತಿ ಸಿಗಲಿದೆ.

ಬಡ್ತಿ ಪ್ರಕ್ರಿಯೆಗೆ ನಿರ್ದಿಷ್ಟ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದ್ದು, ಏಪ್ರಿಲ್ 21ರಿಂದಲೇ ಈ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಕೌನ್ಸೆಲಿಂಗ್ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, ಅರ್ಹ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಲು ಇಲಾಖೆ ಗುರಿ ಹೊಂದಿದೆ. ಜೂನ್‌ನಲ್ಲಿ ಆರಂಭವಾಗುವ ಮುಂದಿನ ಶೈಕ್ಷಣಿಕ ವರ್ಷಕ್ಕೆ ಶಾಲೆಗಳಿಗೆ ಹೊಸ ಮುಖ್ಯ ಶಿಕ್ಷಕರು ಲಭ್ಯವಾಗಲಿದ್ದಾರೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories