ಸಾಲು ಸಾಲು ರಜೆ ಹಿನ್ನೆಲೆ ಸಾರಿಗೆ ಇಲಾಖೆಯಿಂದ ಬಂಪರ್​ ಆಫರ್​ : ರಸ್ತೆಗಿಳಿಯಲಿವೆ ಹೆಚ್ಚುವರಿ ಬಸ್​ಗಳು

ಬೆಂಗಳೂರು : ವೀಕೆಂಡ್​ ಹಾಗೂ ಗಣರಾಜ್ಯೋತ್ಸವ ಒಟ್ಟೊಟ್ಟಿಗೆ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಸಾಲು ಸಾಲು ರಜೆ ದೊರಕಿದೆ. ಈ ಸಂದರ್ಭದಲ್ಲಿ ಪ್ರಯಾಣ ಮಾಡಲು ಇಚ್ಛಿಸುವ ರಾಜ್ಯದ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬಿಎಂಟಿಸಿ ಹೆಚ್ಚುವರಿ ಬಸ್​ಗಳನ್ನು (Additional buses) ರಸ್ತೆಗಿಳಿಸಲು ಮುಂದಾಗಿದೆ.

ಈ ಮೂಲಕ ಪ್ರಯಾಣಿಕರ ಸುಗಮ ಪ್ರಯಾಣಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರದಂದು 265 ಹೆಚ್ಚುವರಿ ಬಿಎಂಟಿಸಿ ಬಸ್​ಗಳು, ಶನಿವಾರದಿಂದ 500 ಹೆಚ್ಚುವರಿ ಬಸ್​ಗಳು ಸಂಚರಿಸಲಿವೆ.

ಶಾಂತಿನಗರ, ಮಜೆಸ್ಟಿಕ್, ಯಶವಂತಪುರ, ಬೈಯಪ್ಪನಹಳ್ಳಿ, ಕೆಂಗೇರಿ, ಸಿಲ್ಕ್ ಬೋರ್ಡ್, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಪ್ರಮುಖ ಬಸ್ ನಿಲ್ದಾಣಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಸೇವೆ ಒದಗಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಇನ್ಮುಂದೆ ಲಂಡನ್​ ಅನುಭವ : ಸಿಟಿಯಲ್ಲಿ ಸಂಚರಿಸಲಿದೆ ಡಬಲ್​ ಡೆಕ್ಕರ್​ ಬಸ್​

ಇನ್ನು ಇದರ ಜೊತೆಯಲ್ಲಿ ಬೆಂಗಳೂರಿನಿಂದ ಮೈಸೂರು, ಮಂಡ್ಯ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ದಾವಣಗೆರೆ, ಶಿವಮೊಗ್ಗ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ಬಳ್ಳಾರಿ, ವಿಜಯಪುರ ಸೇರಿದಂತೆ ಪ್ರಮುಖ ಜಿಲ್ಲೆಗಳಿಗೆ ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್​​ಗಳು ಈ ಮೂರು ದಿನಗಳ ಅವಧಿಯಲ್ಲಿ ಸಂಚರಿಸಲಿವೆ.

ಇದನ್ನೂ ಓದಿ : 20 ರೂಪಾಯಿ ನೀರಿನ ಬಾಟಲಿಗೆ 55 ರೂಪಾಯಿ ವಸೂಲಿ: ಚಂಡೀಗಢದ ರೆಸ್ಟೋರೆಂಟ್‌ಗೆ ಭಾರೀ ದಂಡ!

Good News for Transport Department ongoing holiday Additional buses will be on the road Kannada news

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories