ಆಶಾ ಕಾರ್ಯಕರ್ತೆಯರಿಗೆ ಶುಭ ಸುದ್ದಿ : ರಾಜ್ಯ ಸರ್ಕಾರದಿಂದ ಮೂರನೇ ತ್ರೈಮಾಸಿಕದ ಕಂತು ಹಣ ಬಿಡುಗಡೆ
ASHA Workers: ಕೇಂದ್ರ ಸರ್ಕಾರದ ಗ್ರಾಮೀಣ ಆರೋಗ್ಯ ಮಿಷನ್ನ ಭಾಗವಾಗಿ ಸಮುದಾಯ ಆರೋಗ್ಯ ಕಾರ್ಯಕರ್ತೆಯರಾಗಿ ಕಾರ್ಯ ನಿರ್ವಹಿಸುವ ಆಶಾ ಕಾರ್ಯಕರ್ತೆಯರು ಆರೋಗ್ಯ ಮಾಹಿತಿ, ಸರ್ಕಾರದ ಆರೋಗ್ಯ ಸಂಬಂಧಿ ಯೋಜನೆಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಒಂದು ರೀತಿಯಲ್ಲಿ ಇವರು ಆರೋಗ್ಯ ಇಲಾಖೆ ಮತ್ತು ಜನರ ನಡುವೆ ಕೊಂಡಿಯಂತೆ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಈ ಆಶಾ ಕಾರ್ಯಕರ್ತೆಯರಿಗೆ ಶುಭ ಸುದ್ದಿಯೊಂದು ದೊರಕಿದೆ.
2025-26ನೇ ಸಾಲಿನಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ ಮೇಲ್ದರ್ಜೆಗೆ ಏರಿರುವ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ 1000 ರೂಪಾಯಿಗಳ ತಂಡ ಆಧಾರಿತ ಪ್ರೋತ್ಸಾಹ ಧನ ಪಾವತಿಸಲು ಮೂರನೇ ತ್ರೈಮಾಸಿಕ ಅನುದಾನದ ರೂಪದಲ್ಲಿ 450.12 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ: ಈ ಬಾರಿ ಶಿಕ್ಷಕರಿಗಿಲ್ಲ ವರ್ಗಾವಣೆ ಭಾಗ್ಯ: ರಾಜ್ಯ ಸರ್ಕಾರದಿಂದ ಹೊರಬಿತ್ತು ಹೊಸ ಆದೇಶ
ಈ ಸಂಬಂಧ ಸೂಚನೆ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು, ಸರ್ಕಾರ ಯಾವ ಉದ್ದೇಶಕ್ಕಾಗಿ ಹಣ ಬಿಡುಗಡೆ ಮಾಡಿದೆಯೋ ಕೇವಲ ಆ ಉದ್ದೇಶಕ್ಕಾಗಿ ಮಾತ್ರ ಬಳಕೆ ಮಾಡಬೇಕು ಎಂದಿದ್ದಾರೆ. ಈ ಹಣವನ್ನು ನ್ಯಾಯಸಮ್ಮತವಾಗಿ ಬಳಕೆಮಾಡಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆಯೂ ಸೂಚಿಸಲಾಗಿದೆ. ಹಾಗೂ ಈ ಅನುದಾನದ ಮೊತ್ತವನ್ನು ನಿಯಮಿತವಾಗಿ ಖಜಾನೆ ಮೂಲಕ ಮಾತ್ರ ವ್ಯವಹರಿಸತಕ್ಕದ್ದು ಎಂದು ತಿಳಿಸಲಾಗಿದೆ.



