ನಕಲಿ ಫಲಾನುಭವಿಗಳ ಪತ್ತೆಗೆ ಸರ್ಕಾರದ ಮಹತ್ವದ ಕ್ರಮ : ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆ ಪರಿಷ್ಕರಣೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ಯಾರಂಟಿ ಯೋಜನೆಯ ಲಾಭವನ್ನು ರಾಜ್ಯದ ಜನತೆ ಕಳೆದ ಮೂರು ವರ್ಷಗಳಿಂದ ಪಡೆಯುತ್ತಿದ್ದಾರೆ .

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ಯಾರಂಟಿ ಯೋಜನೆಯ ಲಾಭವನ್ನು ರಾಜ್ಯದ ಜನತೆ ಕಳೆದ ಮೂರು ವರ್ಷಗಳಿಂದ ಪಡೆಯುತ್ತಿದ್ದಾರೆ. ಆದರೆ ಈ ಯೋಜನೆಗಳ ಲಾಭ ಪಡೆಯುವವರ ಪೈಕಿ ನಕಲಿ ಫಲಾನುಭವಿಗಳ ಸಂಖ್ಯೆಯೇ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಅಕ್ರಮ ತಡೆಗೆ ಮಹತ್ವದ ಕ್ರಮ ಕೈಗೊಂಡಿದೆ. ನಿಜವಾದ ಫಲಾನುಭವಿಗಳಿಗೆ ಮಾತ್ರ ಈ ಯೋಜನೆಯ ಲಾಭ ಸಿಗುವಂತೆ ಮಾಡಲು ಹೊಸದಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಈ ಕುರಿತು ಶೀಘ್ರದಲ್ಲಿಯೇ ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಲಿದೆ.

ಗ್ಯಾರಂಟಿ ಯೋಜನೆ ಜಾರಿಯಾದ ಬಳಿಕ ಅನೇಕರು ಮೃತಪಟ್ಟಿದ್ದಾರೆ. ಆದರೆ ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಸದೇ ಗ್ಯಾರಂಟಿ ಯೋಜನೆಗಳ ಲಾಭವನ್ನು ಅನರ್ಹರು ಪಡೆಯುತ್ತಿದ್ದಾರೆ . ಇದು ಮಾತ್ರವಲ್ಲದೇನಕಲಿ ದಾಖಲೆಗಳನ್ನು ಸೃಷ್ಠಿಸಿ ಯೋಜನೆಯ ಲಾಭ ಪಡೆಯುತ್ತಿರುವವರೂ ಇದ್ದಾರೆ. ಈ ಎಲ್ಲದರ ಬಗ್ಗೆ ಶಾಸಕರ ಸಭೆಯಲ್ಲಿ ಚರ್ಚೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

Also Read: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 24 ಕೋಟಿ ವಂಚನೆ: ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಕೇಸ್

ಈ ವಿಚಾರವಾಗಿ ಸ್ವತಃ ಡಿಸಿಎಂ ಡಿ.ಕೆ ಶಿವಕುಮಾರ್​ ಮಾತನಾಡಿದ್ದು, ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅದರಲ್ಲೂ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಮಾಡುವ ತುರ್ತು ಅನಿವಾರ್ಯತೆ ಎದುರಾಗಿದೆ. ಯೋಜನೆಯ ಫಲಾನುಭವಿಗಳ ಮರಣದ ಬಳಿಕವೂ 100 ಕೋಟಿ ರೂಪಾಯಿಗೂ ಅಧಿಕ ಹಣ ನಕಲಿ ಫಲಾನುಭವಿಗಳ ಪಾಲಾಗುತ್ತಿದೆ. ಹೀಗಾಗಿ ಈ ಎಲ್ಲಾ ಅಕ್ರಮಗಳ ತಡಗೆ ಶೀಘ್ರದಲ್ಲಿಯೇ ಗ್ಯಾರಂಟಿ ಯೋಜನೆಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಿದ್ದೇವೆ ಎಂದು ಹೇಳಿದರು.

Governments important step to detect fake beneficiaries State government revises guarantee scheme

 

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories