ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರಿಗೆ ಭರ್ಜರಿ ಗುಡ್ ನ್ಯೂಸ್! ಏನಿದು 600 ಕೋಟಿ ಪ್ಲಾನ್? ಇಲ್ಲಿದೆ ಮಾಹಿತಿ
ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರ ತನ್ನ ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳಲು ಮಾಸ್ಟರ್ ಪ್ಲಾನ್ ಮಾಡಿದೆ.

ದಾವಣಗೆರೆ ಉಪಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ನಡೆ ಅಲ್ಪಸಂಖ್ಯಾತರ ಕೆಂಗಣ್ಣಿಗೆ ಗುರಿಯಾಗಿರುವುದು ತಿಳಿದಿರುವ ವಿಚಾರ. ಇದೀಗ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರ ತನ್ನ ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳಲು ಮಾಸ್ಟರ್ ಪ್ಲಾನ್ ಮಾಡಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತರು ವಾಸಿಸುವ ಕಾಲೋನಿಗಳ ಅಭಿವೃದ್ಧಿಗೆ ಬರೋಬ್ಬರಿ 600 ಕೋಟಿ ರೂಪಾಯಿಗಳ ಬೃಹತ್ ಕಾಮಗಾರಿಗೆ ಹಸಿರು ನಿಶಾನೆ ತೋರಲಾಗಿದೆ.
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಕಾಲೋನಿಗಳಲ್ಲಿ ವಾಸಿಸುವ ಜನರು ಈ ಬೃಹತ್ ಕ್ರಿಯಾ ಯೋಜನೆಯ ಲಾಭ ಪಡೆಯಲಿದ್ದಾರೆ. ಈ ಯೋಜನೆಯಡಿ ರಸ್ತೆಗಳ ಅಭಿವೃದ್ಧಿ, ಡ್ರೈನೇಜ್ ವ್ಯವಸ್ಥೆ, ಕುಡಿಯುವ ನೀರು ಸರಬರಾಜು, ವಿದ್ಯುತ್ ಸೌಕರ್ಯ, ಶಾಲಾ-ಕಾಲೇಜುಗಳು ಮತ್ತು ಆರೋಗ್ಯ ಕೇಂದ್ರಗಳ ನಿರ್ಮಾಣ ಸೇರಿದಂತೆ ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ.
ಈ ಬೃಹತ್ ಕ್ರಿಯಾ ಯೋಜನೆಯ ಲಾಭವನ್ನು ರಾಜ್ಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ ಮತ್ತು ಸಿಖ್ ಸಮುದಾಯಗಳು ಪಡೆದುಕೊಳ್ಳಲಿವೆ. ಅಲ್ಪಸಂಖ್ಯಾತರು ವಾಸವಿರುವ ಕಾಲೋನಿಗಳನ್ನು ಮಾದರಿ ಕಾಲೋನಿಗಳನ್ನಾಗಿ ಮಾಡುವುದು ನಮ್ಮ ಉದ್ದೇಶ ಎಂದು ಸರ್ಕಾರ ಹೇಳಿದೆ. ರಾಜ್ಯ ಸರ್ಕಾರ ಘೋಷಿಸಿರುವ ಈ ಬಂಪರ್ ಗಿಫ್ಟ್ನಿಂದಾಗಿ ಅಲ್ಪಸಂಖ್ಯಾತ ಸಮುದಾಯದವರಲ್ಲಿ ಸಂತಸದ ಅಲೆ ಮೂಡಿದೆ.



