ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪದ ಸುಳಿವು : 3 ದಿನಗಳಿಂದ ವೈಮಾನಿಕ ಸಮೀಕ್ಷೆ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ, ಬಾಗೇಪಲ್ಲಿ ತಾಲ್ಲೂಕುಗಳ ಬೆಟ್ಟ ಗುಡ್ಡಗಳಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ. ನೆರೆ ರಾಜ್ಯದ ಆಂಧ್ರಪ್ರದೇಶದ ಕದರಿ ಬಳಿಯಲ್ಲಿ ಚಿನ್ನದ ನಿಕ್ಷೇಪ […]

Gold deposit in Chikkaballapur

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ, ಬಾಗೇಪಲ್ಲಿ ತಾಲ್ಲೂಕುಗಳ ಬೆಟ್ಟ ಗುಡ್ಡಗಳಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ. ನೆರೆ ರಾಜ್ಯದ ಆಂಧ್ರಪ್ರದೇಶದ ಕದರಿ ಬಳಿಯಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಚಿನ್ನದ ನಿಕ್ಷೇಪ ಪತ್ತೆಗಾಗಿ ವೈಮಾನಿಕ ಸಮೀಕ್ಷೆ ಕೈಗೊಳ್ಳಲಾಗಿದೆ.

ಬಾಗೇಪಲ್ಲಿಯಿಂದ ಕೇವಲ 60 ಕಿಲೋ ಮೀಟರ್​ ದೂರದಲ್ಲಿರುವ ಕದರಿಯಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬೀಚಗಾನಹಳ್ಳಿಯನ್ನು ಕೇಂದ್ರವಾಗಿರಿಸಿಕೊಂಡು ಕೇಂದ್ರ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮತ್ತು ಜಿಯಾಲಾಜಿಕಲ್​ ಸರ್ವೇ ಆಫ್​ ಇಂಡಿಯಾ ಅಧಿಕಾರಿಗಳು ಒಟ್ಟಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಮತ್ತೊಮ್ಮೆ ಜಲಸಂಕಷ್ಟ : ತಮಿಳುನಾಡು – ಕರ್ನಾಟಕ ಶುರು ಜಲಸಮರ

ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿರುವ ಜಿಎನ್​ಐ ತಂಡ ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಗೆ ಎಂಟ್ರಿ ನೀಡಿದೆ. ಮೇ 31ರವರೆಗೂ ಈ ಭಾಗಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಯಲಿದೆ ಎನ್ನಲಾಗಿದೆ. ಸಮೀಕ್ಷಾ ಕಾರ್ಯಕ್ಕೆ ರಾಡಾರ್​ ಸ್ಕ್ಯಾನರ್​ಗಳನ್ನು ಬಳಕೆ ಮಾಡಲಾಗುತ್ತಿದೆ. 15 ಸಿಬ್ಬಂದಿ ಕಾರ್ಯಾಚರಣೆಯ ಭಾಗವಾಗಿದ್ದು ಪ್ರತಿನಿತ್ಯ ಆರು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಲಾಗುತ್ತಿದೆ.

Scroll to Top