ಹಾಸನ ಗಣೇಶ ಮೆರವಣಿಗೆ ಘೋರ ದುರಂತ : ಜನರ ಮೇಲೆ ಟ್ರಕ್ ಹರಿದು 8 ಮಂದಿ ಸಾವು

ಹಾಸನ (Hassan) : ಗಣೇಶ ಮೂರ್ತಿಯ ವಿಸರ್ಜನೆಯ ವೇಳೆಯಲ್ಲಿ ಬಾರೀ ದುರಂತವೊಂದು ಸಂಭವಿಸಿ ಕನಿಷ್ಠ 8 ಮಂದಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಟ್ರಕ್ ಹರಿದು ಈ ದುರಂತ ಸಂಭವಿಸಿದೆ.
ಹಾಸನ ಜಿಲ್ಲೆಯ ಹಾಸನ (Hassan) ತಾಲೂಕಿನ ಮೊಸಳೆಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಣೇಶ ಮೆರವಣಿಗೆಯಲ್ಲಿ ತೆರಳುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ 4 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ರೆ, ಉಳಿದ 4 ಮಂದಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಟ್ಯಾಂಕರ್ ಮಹಾರಾಷ್ಟ್ರಕ್ಕೆ ಸೇರಿದ್ದಾಗಿದ್ದು ಮಾರ್ಗವಾಗಿ ತೆರಳುತ್ತಿತ್ತು. ಆಗ ಎದುರಿನಿಂದ ಬಂದ ಬೈಕ್ ನನ್ನು ಕಾಪಾಡಲು ಡಿವೈಡರ್ ಕಡೆ ಟ್ಯಾಂಕರನ್ನು ಚಾಲಕ ತಿರುಗಿಸಿದ್ದಾನೆ. ಆದರೆ ಆತನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದಲ್ಲೇ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಹರಿದೆ ಅಂತ ಹೇಳಲಾಗುತ್ತಿದೆ.
ಇದನ್ನೂ ಓದಿ : ಆನ್‌ಲೈನ್, ವೆಬ್‌ಸೈಟ್‌ನಲ್ಲಿ ಜಾತಿ ಸಮೀಕ್ಷೆ
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು , ಚಾಲಕನನ್ನು ವಶಕ್ಕೆ ಪಡೆದಿದ್ದಾರೆ . ಒಮ್ಮೆಲೆ ಜನರತ್ತ ನುಗ್ಗಿದ ಟ್ರಕ್ 8 ಮಂದಿಯನ್ನು ಬಲಿ ಪಡೆದಿದೆ. 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.
ಘಟನಾ ಸ್ಥಳಕ್ಕೆ ಮಾಜಿ ಸಚಿವ ಎಚ್‌ಡಿ ರೇವಣ್ಣ, ಸಂಸದ ಶ್ರೇಯಸ್ ಪಟೇಲ್, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪೊಲೀಸರ ವೈಫಲ್ಯವೇ ಘಟನೆಗೆ ಕಾರಣ ಎಂದು ಎಚ್‌ಡಿ ರೇವಣ್ಣ ಆರೋಪಿಸಿದ್ದಾರೆ.
ಇದನ್ನೂ ಓದಿ : ಜಾತಿಗಣತಿ ಸಮೀಕ್ಷೆ : ಹೊಸ ಜಾತಿಯ ನಾಯಕರಣ ಬೇಡಾ : ಸುನಿಲ್ ಕುಮಾರ್
ಹಾಸನದ ಮೊಸಳೆಹಳ್ಳಿ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದು, ಗಾಯಾಳುಗಳಿಗೆ ರಾಜ್ಯ ಸರಕಾರ ಉಚಿತ ಚಿಕಿತ್ಸೆ ಕೊಡಿಸಬೇಕು. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ, ಗಾಯಾಳುಗಳು ಆದಷ್ಟು ಶೀಘ್ರದಲ್ಲಿ ಚೇತರಿಸಿಕೊಳ್ಳಲಿ ಎಂದಿದ್ದಾರೆ.



