ರಾಜ್ಯಕ್ಕೆ ಭಾರೀ ಮಳೆ ಎಚ್ಚರಿಕೆ! ಜೂನ್ 5 ರವರೆಗೆ ಗುಡುಗು ಮಿಂಚು ಸಹಿತ ವರುಣಾರ್ಭಟ

ಕರ್ನಾಟಕದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸೂಚಿಸಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಜೂನ್ 1ರಿಂದ 4ರವರೆಗೆ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಜೂನ್ 3ರಿಂದ 5ರವರೆಗೆ ಕರಾವಳಿ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದೆ.

ಮಳೆಯ ಜೊತೆಗೆ ರಾಜ್ಯದಲ್ಲಿ ತಾಪಮಾನದಲ್ಲೂ ಏರಿಕೆ ಕಂಡುಬರಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ವಿಶೇಷವಾಗಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಗಾಳಿಯ ದಿಕ್ಕಿನ ಬದಲಾವಣೆಯಿಂದ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರೈತರು ಹಾಗೂ ಸಾರ್ವಜನಿಕರು ಹವಾಮಾನ ಬದಲಾವಣೆ ಕುರಿತು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ.

ಕೆಲವು ಪ್ರದೇಶಗಳಲ್ಲಿ 64.5 ಮಿ.ಮೀ.ದಿಂದ 115.5 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

Arun Gundmi | ಅರುಣ್ ಗುಂಡ್ಮಿ

Arun Gundmi Editor In Chief News Next Kannada. Working in more than 20 Years in Kannada News Media (Print, Digital and News Channels) Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021 More »

Related Stories