ಬಾರೀ ಮಳೆ : ಕರಾವಳಿ ಸೇರಿ ರಾಜ್ಯದ 14 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ಬೆಂಗಳೂರು: Heavy Rain: ಕರ್ನಾಟಕ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಬಾರಿ ಮಳೆ ಮುಂದುವರಿಯಲಿದೆ. ಸಿಲಿಕಾನ್‌ ಸಿಟಿ ಬೆಂಗಳೂರು(Bengaluru) ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದೆ. ಪುತ್ತೂರಿನಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವನ್ನಪ್ಪಿದ್ದಾರೆ.

ಕಳೆದ ನಾಲ್ಕು ದಿನಗಳಿಂದಲೂ ಕರಾವಳಿ ಜಿಲ್ಲೆಗಳಲ್ಲಿ ಬಾರೀ ಮಳೆ ಸುರಿಯುತ್ತಿದೆ.ಅಕ್ಟೋಬರ್‌ 15ರ ವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾರೀ ಮಳೆಯ ಹಿನ್ನೆಲೆಯಲ್ಲಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಬಾರೀ ಮಳೆಯಿಂದಾಗಿ ಬಹುತೇಕ ಪ್ರದೇಶಗಳು ಜಲಾವೃತವಾಗಿದೆ.

Also Read: ಕುಮಟಾ : ಚಲಿಸುತ್ತಿದ್ದ ವಾಹನಕ್ಕೆ ನುಗ್ಗಿದ ದರೋಡೆಕೋರ, ಸಿನಿಮೀಯ ರೀತಿಯಲ್ಲಿ ಪಾರಾಯ್ತು ಕುಟುಂಬ

ಕರಾವಳಿಯಲ್ಲಿ 2 ಆರೆಂಜ್‌ ಅಲರ್ಟ್‌

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್‌ 11 ರಂದು ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ. ಅದ್ರಲ್ಲೂ ಗುಡುಗು, ಸಿಡಿಲು ಸಹಿತ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ.

ಮುಂದಿನ ಎರಡು ದಿನಗಳ ಕಾಲ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಬಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಡಿಲು ಬಡಿದು ಪುತ್ತೂರು ವ್ಯಕ್ತಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರು ತಾಲೂಕಿನ ಅನಡ್ಕದಲ್ಲಿ ಸಿಡಿಲು ಬಡಿದು ವ್ಯಕ್ತಿಯೋರ್ವರು ಸಾವನ್ನಪ್ಪಿದ್ದಾರೆ. ಅನಡ್ಕದ ನಿವಾಸಿಯಾಗಿರುವ ವಾಮನ ಎಂಬವರು ಮನೆಯಲ್ಲಿ ಕುಳಿತಿದ್ದ ವೇಳೆಯಲ್ಲಿ ಸಿಡಿಲು ಬಡಿದಿದೆ. ಇದರಿಂದಾಗಿ ವಾವನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Also Read: ಪರಪ್ಪನ ಅಗ್ರಹಾರ : ಹೊರಗೆ ನೆಟ್‌ವರ್ಕ್‌ ಸಮಸ್ಯೆ, ಕೈದಿಗಳು ಮೊಬೈಲ್‌ ಬಳಸ್ತಾರೆ : ಆರ್.ಅಶೋಕ್‌ ಆರೋಪ

ಬೆಂಗಳೂರಲ್ಲಿ ಬಹುತೇಕ ಕಡೆ ಜಲಾವೃತ

ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಕಳೆದ ಎರಡು ದಿನಗಳಿಂದಲೂ ಬಾರೀ ಮಳೆ ಸುರಿಯುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಬಹುತೇಕ ಪ್ರದೇಶಗಳು ಜಲಾವೃತವಾಗಿದೆ.
ಇನ್ನು ಎರಡು ದಿನಗಳ ಕಾಲ ಬೆಂಗಳೂರಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ ಬೆಂಗಳೂರಿನ ಹಲವರು ಕಡೆಗಳಲ್ಲಿ ಇಂದು ಬಿಸಿಲು ಕಾಣಿಸಿಕೊಂಡಿದೆ. ಆದರೆ ಯಾವುದೇ ಕ್ಷಣದಲ್ಲಿಯೂ ಮಳೆ ಸುರಿಯುವ ಸಾಧ್ಯತೆಯಿದೆ.

ಕರ್ನಾಟಕದ ಚಿಕ್ಕಮಗಳೂರು, ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories