ಮುಂದಿನ 24 ಗಂಟೆಗಳಲ್ಲಿ ಸುರಿಯಲಿದೆ ಭಾರಿ ಮಳೆ; ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ!
ಕರ್ನಾಟಕದಲ್ಲಿ ಇಂದಿನಿಂದ ಆರಿದ್ರಾ ಮಳೆ ಆರಂಭಗೊಳ್ಳಲಿದ್ದು, ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರ್ನಾಟಕ ಈ ಬಾರಿ ಮಳೆಯ ಕೊರತೆಯನ್ನು ಎದುರಿಸುತ್ತಿದ್ದು, ರಾಜ್ಯದ ರೈತರು ಆರಿದ್ರಾ ಮಳೆಯ ಮೇಲೆ ನಿರೀಕ್ಷೆಯನ್ನು ಇಟ್ಟಿದ್ದಾರೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅದ್ರಲ್ಲೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಬಾರೀ ಮಳೆಯಾಗಲಿದ್ದು, ಜೊತೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು..ಇಂದು ಮತ್ತು ನಾಳೆ ತೀವ್ರ ಮಳೆ ಸಾಧ್ಯತೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಮಳೆಯಾಗಲಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಮೈಸೂರು, ಮಂಡ್ಯ, ತುಮಕೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಮುಂಗಾರು ಬಿತ್ತನೆ ಈಗಾಗಲೇ ಆರಂಭಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ ಎದುರಾಗಲಿದೆ. ವರ್ಷಂಪ್ರತಿ ಆರಿದ್ರಾ ಮಳೆ ರೈತರಿಗೆ ಅದೃಷ್ಟವನ್ನು ತರಲಿದ್ದು, ಈ ಬಾರಿಯೂ ಅನ್ನದಾತರು ಆರಿದ್ರಾ ಮಳೆಯ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಒಂದೊಮ್ಮೆ ಆರಿದ್ರಾ ಮಳೆ ಕೈಕೊಟ್ಟರೆ ಈ ಬಾರಿ ಬರಗಾಲ ಭೀತಿಯೂ ಕಾಡುತ್ತಿದೆ.