ಮೇ 21ರವರೆಗೂ ಮಳೆ ಅಬ್ಬರ: ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

ರಾಜ್ಯದಲ್ಲಿ ಮೇ 21ರವರೆಗೂ ಮಳೆ, ಮಿಂಚು, ಗುಡುಗು ಹಾಗೂ ಬಿರುಗಾಳಿ ಸಹಿತ ವಾತಾವರಣ ಮುಂದುವರಿಯಲಿದೆ

ರಾಜ್ಯದಲ್ಲಿ ಮುಂಗಾರುಪೂರ್ವ ಆರ್ಭಟ ಜೋರಾಗಿದೆ. ಈಗಾಗಲೇ ರಾಜ್ಯದಲ್ಲಿ ಸಿಡಿಲಿನ ಅಬ್ಬರಕ್ಕೆ ಹಲವರು ಪ್ರಾಣ ತೆತ್ತಿದ್ದಾರೆ. ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹಾಗೂ ಕೃಷಿ ಭೂಮಿ ವರುಣನ ಆರ್ಭಟಕ್ಕೆ ನಲುಗಿ ಹೋಗಿದೆ. ಈ ಎಲ್ಲದರ ನಡುವೆ ಭಾರತೀಯ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ನೀಡಿದ್ದು ರಾಜ್ಯದಲ್ಲಿ ಮೇ 21ರವರೆಗೂ ಮಳೆ, ಮಿಂಚು, ಗುಡುಗು ಹಾಗೂ ಬಿರುಗಾಳಿ ಸಹಿತ ವಾತಾವರಣ ಮುಂದುವರಿಯಲಿದೆ ಎಂದು ಹೇಳಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ಆರೆಂಜ್​ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಮೇ 21ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್​ ಅಲರ್ಟ್ ಘೋಷಿಸಲಾಗಿದೆ. ಅಂತೆಯೇ ಮಿಕ್ಕೆಲ್ಲ ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ .

ಇದನ್ನೂ  ಓದಿ : ಮದ್ಯಪ್ರಿಯರಿಗೆ ಸಿಹಿಸುದ್ದಿ: ಕರ್ನಾಟಕದಲ್ಲಿ ಬಿಯರ್ ಬೆಲೆ ಭಾರೀ ಇಳಿಕೆ!

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ. ಕಲಬುರಗಿ , ರಾಯಚೂರು, ಬಾಗಲಕೋಟೆ, ಯಾದಗಿರಿ, ವಿಜಯಪುರ, ಕೊಡಗು , ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಮಗಳೂರಿನಲ್ಲಿ ಸಾಧಾರಣೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗ ಗಂಟೆಗೆ 50 ಕಿಲೋಮೀಟರ್​ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories