ಮುಂದಿನ ನಾಲ್ಕು ದಿನಗಳ ಕಾಲ ಇರಲಿದೆ ಮಳೆಯ ಅಬ್ಬರ : ಕರಾವಳಿ-ಮಲೆನಾಡಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ಕರ್ನಾಟಕದಲ್ಲಿ ಮುಂಗಾರು ಮಾರುತಗಳು ಸದ್ಯ ಅತ್ಯಂತ ಚುರುಕುಗೊಂಡಿದ್ದು, ವರುಣನ ಅಬ್ಬರ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇದರ ಬೆನ್ನೆಲ್ಲೇ ಹವಾಮಾನ ಇಲಾಖೆಯು ಮುಂಬರುವ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಹಾಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ಕರ್ನಾಟಕದಲ್ಲಿ ಮುಂಗಾರು ಮಾರುತಗಳು ಸದ್ಯ ಅತ್ಯಂತ ಚುರುಕುಗೊಂಡಿದ್ದು, ವರುಣನ ಅಬ್ಬರ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇದರ ಬೆನ್ನೆಲ್ಲೇ ಹವಾಮಾನ ಇಲಾಖೆಯು ಮುಂಬರುವ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಹಾಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಸುರಕ್ಷತೆಯ ದೃಷ್ಟಿಯಿಂದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಜುಲೈ 2ರವರೆಗೆ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದೆ. ಪ್ರಮುಖವಾಗಿ ಜೂನ್ 30ರಂದು ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾಸನ, ಶಿವಮೊಗ್ಗ ಹಾಗೂ ಮೈಸೂರು ಸೇರಿದಂತೆ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Also Read: ನಶೆ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕ್ರಮ : 100 ಕೋಟಿ ನಷ್ಟವಾದ್ರೂ ಡೋಂಟ್​ಕೇರ್​ ಎಂದ ಸಿಎಂ

ರಾಜಧಾನಿ ಬೆಂಗಳೂರು, ಗ್ರಾಮಾಂತರ ಪ್ರದೇಶಗಳು ಹಾಗೂ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆ ಸಾಧ್ಯತೆಯಿದೆ. ಮಳೆ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದಿರಲು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ.

Heavy rains to continue for next four days Orange alert issued for coastal and mountainous areas

 

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories