ಹೊನ್ನಾವರ : ನಾಳೆ ಈ ಭಾಗಗಳಲ್ಲಿ ಪವರ್ ಕಟ್
Honnavara: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ(Honnavar) ತಾಲೂಕಿನ ಕೆಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ತಿಳಿಸಿದೆ.
ಹೊನ್ನಾವರ ತಾಲೂಕಿನ ಕೆಲವು ಫೀಡರ್ ವ್ಯಾಪ್ತಿಯಲ್ಲಿ ಹೆಸ್ಕಾಂ ನಿರ್ವಹಣಾ ಕಾಮಗಾರಿಕೆಯನ್ನು ಕೈಗೆತ್ತಿಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3.30ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಹೊನ್ನಾವರ ತಾಲೂಕಿನ ಗೇರುಸೊಪ್ಪ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕೆಲಸಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಅಕ್ಟೋಬರ್ 18ರಂದು ಮಾಗೋಡ, ಉಪ್ಪೋಣಿ, ರೈಟ್, ಲೆಫ್ಟ್ ಹಾಗೂ ಕಾಲೋನಿ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಗೆ ಅಡ್ಡಿಯಾಗಲಿದೆ.
ಗ್ರಾಹಕರು ಸಹಕರಿಸುವಂತೆ ಹೊನ್ನಾವರ ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನೀಯರ್ (ವಿ) ಹಾಗೂ ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Also Read: ವಿದ್ಯಾರ್ಥಿನಿ ಮೇಲೆ ಜೂನಿಯರ್ ವಿದ್ಯಾರ್ಥಿಯಿಂದ ಅತ್ಯಾ*ಚಾರ : ವಿದ್ಯಾರ್ಥಿ ಅರೆಸ್ಟ್



