ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ
Weather Report Karnataka: ವಾತಾವರಣದಲ್ಲಿ ಭಾರೀ ಏರುಪೇರು ಉಂಟಾಗುವ ಸಾಧ್ಯತೆಯಿದ್ದು ರೈತರು ಹಾಗೂ ಪ್ರವಾಸಿಗರಿಗೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ (Weather Report Karnataka) ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಾತಾವರಣದಲ್ಲಿ ಭಾರೀ ಏರುಪೇರು ಉಂಟಾಗುವ ಸಾಧ್ಯತೆಯಿದ್ದು ರೈತರು ಹಾಗೂ ಪ್ರವಾಸಿಗರಿಗೆ ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.
ಉತ್ತರ ಕರ್ನಾಟಕದ ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಭಾಗಗಳಲ್ಲಿ ಇಂದು ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಮಳೆ ಮಾತ್ರವಲ್ಲದೇ ಪ್ರಬಲವಾದ ಗುಡುಗು, ಮಿಂಚಿನ ಆರ್ಭಟ ಕೂಡ ಇರಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಉಡುಪಿಯಲ್ಲಿ ಅತಿಯಾಯ್ತು ವಾಯು ಮಾಲಿನ್ಯ; ಉಸಿರಾಡೋದೂ ಕಷ್ಟ ! ಶ್ವಾಸಕೋಶದ ಬಗ್ಗೆ ಇರಲಿ ಎಚ್ಚರ
ಇನ್ನು ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಹೀಗಾಗಿ ಈ ಎಲ್ಲಾ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಬಂದ ಸಂದರ್ಭದಲ್ಲಿ ಹಳೆಯ ಕಟ್ಟಡಗಳು ಹಾಗೂ ಮರಗಳ ಅಡಿಯಲ್ಲಿ ಆಶ್ರಯಪಡೆಯದಂತೆ ಸೂಚನೆ ನೀಡಲಾಗಿದೆ.



